arrest

ಗಾಂಜಾ ನಶೆಯಲ್ಲಿ ಶೆಟ್ಟಿ ಗಲ್ಲಿಯಲ್ಲಿ ಅಸಹಜ ವರ್ತನೆ: ಮಾರ್ಕೆಟ್ ಠಾಣೆ ಪೊಲೀಸರಿಂದ ಯುವಕನ ಬಂಧನ!

Share

ಬೆಳಗಾವಿಯ ಶೆಟ್ಟಿ ಗಲ್ಲಿಯ ಸಾರ್ವಜನಿಕ ರಸ್ತೆಯಲ್ಲಿ ಮಾದಕ ದ್ರವ್ಯ ಸೇವಿಸಿ ಅಸಹಜವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಈ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡಕ್ಕೆ ಮೇಲಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಶೆಟ್ಟಿ ಗಲ್ಲಿಯ ಸಾರ್ವಜನಿಕ ರಸ್ತೆಯ ಮೇಲೆ ಅಸಹಜವಾಗಿ ವರ್ತಿಸುತ್ತಿದ್ದ ಸುಜಲ್ ಕೃಷ್ಣಾನಾಥ ಪಾಟೀಲ (19) ಎಂಬಾತನನ್ನು ಮಾರ್ಕೆಟ್ ಠಾಣೆಯ ಪಿಎಸ್‌ಐ ವಿಠಲ ಹಾವನ್ನವರ ಮತ್ತು ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಆತನು ಗಾಂಜಾದಂತಹ ಮಾದಕ ಪದಾರ್ಥಗಳನ್ನು ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ 51/2026 ಕಲಂ 27(b) ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ದ್ರವ್ಯ ಸೇವಿಸಿ ಅಶಾಂತಿ ಉಂಟುಮಾಡುತ್ತಿದ್ದ ಆರೋಪಿಯನ್ನು ಸಕಾಲದಲ್ಲಿ ಬಂಧಿಸಿದ ಪಿಎಸ್‌ಐ ವಿಠಲ ಹಾವನ್ನವರ ಹಾಗೂ ಅವರ ಸಿಬ್ಬಂದಿಯ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಮತ್ತು ಡಿಸಿಪಿ ಅವರು ವಿಶೇಷವಾಗಿ ಶ್ಲಾಘಿಸಿದ್ದಾರೆ.

Tags:

error: Content is protected !!