Vijaypura

ಒಳ ಮೀಸಲಾತಿಗಾಗಿ ಕಾಂಗ್ರೆಸ್ ಯಾವುದೇ ಧ್ವನಿ ಎತ್ತುತ್ತಿಲ್ಲಾ; ಸಂಸದ ಗೋವಿಂದ ಕಾರಜೋಳ ವಾಗ್ದಾಳಿ

Share

ಒಳ ಮೀಸಲಾತಿಗಾಗಿ ಕಾಂಗ್ರೆಸ್ ಯಾವುದೇ ಧ್ವನಿ ಎತ್ತುತ್ತಿಲ್ಲಾ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ಭಾನುವಾರದಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ನವರು ಒಳ ಮೀಸಲಾತಿಗಾಗಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡುತ್ತಿದ್ದರು. ಆದರೆ ಈಗ ತಾವು ಅಧಿಕಾರಕ್ಕೆ ಬಂದರೂ ಸಹ ಒಳ ಮೀಸಲಾತಿಗಾಗಿ ಯಾವುದೇ ಧ್ವನಿಯೆತ್ತಿಲ್ಲ. ಇವರ ರಾಜಕೀಯ ಏನಿದ್ದರೂ ಅಧಿಕಾರಕ್ಕಾಗಿ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Tags:

error: Content is protected !!