Bagalkot

ಬಾಗಲಕೋಟೆ ಉಪಚುನಾವಣೆ: ಟಿಕೆಟ್ ಆಕಾಂಕ್ಷಿಗೆ ಮಣೆ ಹಾಕಿದ ಕಾಂಗ್ರೆಸ್, ಬಿಟಿಡಿಎ ಅಧ್ಯಕ್ಷರಾಗಿ ಪ್ರಕಾಶ್ ತಪಶೆಟ್ಟಿ ನೇಮಕ

Share

ಬಾಗಲಕೋಟೆ ಉಪಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಆಡಳಿತರೂಢ ಕಾಂಗ್ರೆಸ್ ಪಕ್ಷವು ತನ್ನ ಗೆಲುವಿನ ತಂತ್ರಗಾರಿಕೆಯನ್ನು ತೀವ್ರಗೊಳಿಸಿದ್ದು, ಪ್ರಮುಖ ಲಿಂಗಾಯತ ನಾಯಕ ಪ್ರಕಾಶ್ ತಪಶೆಟ್ಟಿ ಅವರನ್ನು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ (BTDA) ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಪಕ್ಷದಲ್ಲಿನ ಅಸಮಾಧಾನವನ್ನು ತಣಿಸುವ ‘ಮೇಜರ್ ಸರ್ಜರಿ’ ನಡೆಸಿದೆ.
ಈ ಸಂಬಂಧ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯಲಕ್ಷ್ಮೀ ಎಸ್. ಅವರು ಅಧಿಕೃತ ಆದೇಶ ಹೊರಡಿಸಿದ್ದು, ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಪ್ರಕಟಿಸಿದ್ದಾರೆ. ಮುಂಬರುವ ಉಪಚುನಾವಣೆಯಲ್ಲಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಪ್ರಕಾಶ್ ತಪಶೆಟ್ಟಿ ಅವರಿಗೆ ಅಭಿವೃದ್ಧಿ ಪ್ರಾಧಿಕಾರದ ಸಾರಥ್ಯ ನೀಡುವ ಮೂಲಕ, ಪಕ್ಷದೊಳಗಿನ ಭಿನ್ನಮತವನ್ನು ಶಮನಗೊಳಿಸಿ ಸಮುದಾಯದ ಮತಗಳನ್ನು ಸೆಳೆಯಲು ಕಾಂಗ್ರೆಸ್ ಹೈಕಮಾಂಡ್ ತಂತ್ರ ರೂಪಿಸಿದೆ.

Tags:

error: Content is protected !!