Vijaypura

ಉಪ ಚುನಾವಣೆ ಸೇರಿದಂತೆ ಕೇರಳ, ಅಸ್ಸಾಂ ಗಳಲ್ಲಿ ಕಾಂಗ್ರೆಸ್ ಗೆ ಗೆಲುವು; ಸಚಿವ ಎಂ.ಬಿ.ಪಾಟೀಲ ವಿಶ್ವಾಸ

Share

ರಾಜ್ಯದ ಬಾಗಲಕೋಟ ಹಾಗೂ ದಾವಣಗೆರೆ ಸೇರಿದಂತೆ ಕೇರಳ ಅಸ್ಸಾಂಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಹಾಗೂ ತಮಿಳುನಾಡಿನಲ್ಲಿ ಡಿಎಂಕೆ ಪಶ್ಚಿಮ ಬಂಗಾಳದಲ್ಲಿ ಮಮತಾ ಗೆಲ್ಲುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು. ವಿಜಯಪುರ ನಗರದಲ್ಲಿ ಸಚಿವ ಎಂ ಬಿ ಪಾಟೀಲ ಮಾದ್ಯಮಗಳ ಜೊತೆಗೆ ಮಾತನಾಡಿ ಕೇರಳ, ತಮಿಳುನಾಡು, ಆಸ್ಸಾಂ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿ ದಾವಣಗೆರೆ ಬಾಗಲಕೋಟೆ ಉಪ ಚುನಾವಣೆಗೆ ಕಡಿಮೆ ಸಮಯ ನಿಗದಿ ಮಾಡಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಹೆಚ್ಚು ಸಮಯ ಇಟ್ಟಿದ್ದು ಅದರ ಕುರಿತು ಮಾತನಾಡಲಾರೆ ಎಂದರು‌ ಇನ್ನೂ ಎಷ್ಟೇ ಸಮಯವಿಟ್ಟರೂ ನಮ್ಮ ಕಾಂಗ್ರೆಸ್ ಗೆಲ್ಲುತ್ತದೆ, ಕೇರಳ ಅಸ್ಸಾಂಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಹಾಗೂ ತಮಿಳುನಾಡಿನಲ್ಲಿ ಡಿಎಂಕೆ ಪಶ್ಚಿಮ ಬಂಗಾಳದಲ್ಲಿ ಮಮತಾ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags:

error: Content is protected !!