ಹುಬ್ಬಳ್ಳಿಯಲ್ಲಿ ಹಾಡಾಗಲೇ ಕಳ್ಳರ ಹಾವಳಿ ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜನ ಸಂಚಾರ ಇರುವ ಸಮಯದಲ್ಲೇ ಅಂಗಡಿ ಮುಂದೆ ನಿಲ್ಲಿಸಿದ್ದ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅಂಗಡಿ ಮುಂಭಾಗ ನಿಲ್ಲಿಸಿದ್ದ ವಾಹನವನ್ನು ಕಳ್ಳರು ಹಾಡಾಗಲೇ ಕದ್ದು ಪರಾರಿಯಾಗಿದ್ದಾರೆ. ಈ ಸಂಪೂರ್ಣ ಘಟನೆ ಸಮೀಪದಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹಾಡಾಗಲೇ ನಡೆದ ಈ ಕಳ್ಳತನ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ…
ಈ ಕುರಿತು ವಾಹನದ ಮಾಲೀಕರು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
