Dharwad

ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಎಚ್ಚರಿಕೆವಹಿಸಿ- ಶುವಲೀಲಾ ಕುಲಕರ್ಣಿ.

Share

ಧಾರವಾಡ ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಗಳ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಶಿವಲೀಲಾ ಕುಲಕರ್ಣಿ ಅಧಿಕಾರಿಗಳಿಗೆ ತಿಳಿಸಿದರು. ‌

 

ಧಾರವಾಡ ನಗರದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಬೇಸಿಗೆಯ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಪೂರ್ವಭಾವಿ ಸಭೆ ಜರುಗಿಸಿ ಮಾತನಾಡಿದ ಅವರು, ಬರುವ ಬೇಸಿಗೆಯ ತೀವ್ರತೆಯನ್ನು ಎದುರಿಸಲು ಹಾಗೂ ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ತಹಶಿಲ್ದಾರರು ಸೇರಿ ಪಂಚಾಯತ್ ಮಟ್ಟದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸುವುದು. ನೀರಿನ ಅಭಾವವಿರುವ ಕಡೆಗಳಲ್ಲಿ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಒದಗಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವುದು. ಸಾರ್ವಜನಿಕರಿಂದ ಬರುವ ದೂರುಗಳಿಗೆ ವಿಳಂಬ ಮಾಡದೆ, ತಕ್ಷಣವೇ ಸ್ಪಂದಿಸಿ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು. ಇನ್ನೂ ಸಭೆಯಲ್ಲಿ ತಹಶೀಲ್ದಾರ ಸೇರಿ ಧಾರವಾಡ ತಾಲೂಕು ಪಂಚಾಯತ್ EO, ಜಿಲ್ಲೆ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ PDOಗಳು, ಆಡಳಿತಾಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!