Bagalkot

ಬಾಗಲಕೋಟೆ ಉಪಸಮರಕ್ಕೆ ರೈತ ಸಂಘದ ಎಂಟ್ರಿ: ಕಾಂಗ್ರೆಸ್-ಬಿಜೆಪಿಗೆ ಸೆಡ್ಡು ಹೊಡೆದ ಆನಂದ್ ಜಕಾತಿ!

Share

ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಕಣ ಈಗ ರಂಗೇರಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಗೆ ಸವಾಲೆಸೆಯಲು ಉತ್ತರ ಕರ್ನಾಟಕ ರೈತ ಸಂಘ ಅಖಾಡಕ್ಕಿಳಿದಿದೆ. ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಜಕಾತಿ ಅವರು ಈ ಬಾರಿ ಸ್ಪರ್ಧಿಸುವುದು ಖಚಿತವಾಗಿದ್ದು, ಮಾರ್ಚ್ 20 ರಂದು ಬೃಹತ್ ಶಕ್ತಿ ಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಲೆಕ್ಕಾಚಾರ ಶುರುವಾಗಿದೆ. ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜ್ ಕರಿಗಾರ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ರಾಷ್ಟ್ರೀಯ ಪಕ್ಷಗಳಿಂದ ರೈತ ವರ್ಗ ಸತತವಾಗಿ ತುಳಿತಕ್ಕೊಳಗಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಧ್ವನಿ ಎತ್ತಲು ರೈತ ಸಂಘಟನೆಯೇ ನೇರವಾಗಿ ಚುನಾವಣಾ ಕಣಕ್ಕಿಳಿಯುವುದು ಅನಿವಾರ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ರೈತ ಸಂಘದ ಬಾಗಲಕೋಟೆ ಜಿಲ್ಲಾಧ್ಯಕ್ಷ ಆನಂದ್ ಜಕಾತಿ ಅವರು ಸಂಘಟನೆಯ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಮಾರ್ಚ್ 20 ರಂದು ಸಾವಿರಾರು ರೈತರ ಸಮ್ಮುಖದಲ್ಲಿ ಆನಂದ್ ಜಕಾತಿ ಅವರು ನಾಮಪತ್ರ ಸಲ್ಲಿಸಲಿದ್ದು, ಇದು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ. ರೈತ ಮತಗಳ ಧ್ರುವೀಕರಣವಾದರೆ ರಾಷ್ಟ್ರೀಯ ಪಕ್ಷಗಳ ಗೆಲುವಿನ ಹಾದಿ ದುಸ್ತರವಾಗಲಿದೆ ಎಂಬ ಚರ್ಚೆ ಈಗ ಗಲ್ಲಿ ಗಲ್ಲಿಯಲ್ಲೂ ಕೇಳಿಬರುತ್ತಿದೆ.

Tags:

error: Content is protected !!