Belagavi

ವಿಜಯೇಂದ್ರ ವಿರುದ್ಧ ಯತ್ನಾಳ್ ಗರಂ: ಶಾಮನೂರು-ಬಿಎಸ್‌ವೈ ಕುಟುಂಬದ ಮಧ್ಯೆ ‘ಡೀಲಿಂಗ್’ ರಾಜಕಾರಣ ಎಂದ ಬಸನಗೌಡ!

Share

• ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ
• ಶಾಮನೂರು-ಯಡಿಯೂರಪ್ಪ ಕುಟುಂಬಗಳ ನಡುವೆ ಹೊಂದಾಣಿಕೆ
• ಸೋಷಿಯಲ್ ಮೀಡಿಯಾಕ್ಕೆ 50 ಲಕ್ಷ ಖರ್ಚು
• ಉಪಚುನಾವಣೆಯಲ್ಲಿ ಸರಿಯಾಗಿ ಕೆಲಸ ಮಾಡುವಂತೆ ಎಚ್ಚರಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಾಗ್ದಾಳಿ ಮಾಡಿದ ಯತ್ನಾಳ್, ಅವರದ್ದು ಶಾಮನೂರು ಜೊತೆ ಹೊಂದಾಣಿಕೆಯಿದೆ, ಹಾಗಾಗಿ ಬಿಜೆಪಿ ಪರ ಕೆಲಸ ಮಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ಇನ್ನು ಶಾಮನೂರು ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ ಸಿಗುತ್ತೋ ಇಲ್ವೋ ಅದೂ ಸಹ ಗೊತ್ತಿಲ್ಲ. ಶಾಮನೂರು, ಯಡಿಯೂರಪ್ಪ ಕುಟುಂಬಗಳು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದಿದ್ದಾರೆ.

 

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಚರಂತಿಮಠಗೆ ಬೆಂಬಲಿಸುವೆ. ಚರಂತಿಮಠ ಹಾಗೂ ನಮ್ಮದು ಹಳೆಯ ಸಂಬಂಧ. ನನ್ನ ಕಷ್ಟ ಕಾಲದಲ್ಲಿ ಸಹಾಯ ಮಾಡಿದ್ದಾರೆ. ಅವರಿಗೆ ಈ ಹಿಂದೆ ಬಿಜೆಪಿ ಟಿಕೆಟ್ ಕೊಡಿಸಿದ್ದೇ ನಾನು. ಆಗ ವೀರಣ್ಣ ಚರಂತಿಮಠಗೆ ಟಿಕೆಟ್ ಕೊಡುವ ಮನಸ್ಸು ಯಡಿಯೂರಪ್ಪಗೆ ಇರಲಿಲ್ಲ. ಅನಂತಕುಮಾರ ನಾನು ಹಾಗೂ ಇತರರು ಸೇರಿ ಚರಂತಿಮಠ ಅವರಿಗೆ ಟಿಕೆಟ್ ಕೊಡಿಸಿದ್ದೇವು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಾಗ್ದಾಳಿ ಮಾಡಿದ ಯತ್ನಾಳ್, ಅವರದ್ದು ಶಾಮನೂರು ಜೊತೆ ಹೊಂದಾಣಿಕೆಯಿದೆ, ಹಾಗಾಗಿ ಬಿಜೆಪಿ ಪರ ಕೆಲಸ ಮಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ಇನ್ನು ಶಾಮನೂರು ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ ಸಿಗುತ್ತೋ ಇಲ್ವೋ ಅದೂ ಸಹ ಗೊತ್ತಿಲ್ಲ. ಶಾಮನೂರು, ಯಡಿಯೂರಪ್ಪ ಕುಟುಂಬಗಳು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಒಂದು ವೇಳೆ ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಮುಸ್ಲಿಂಮರಿಗೆ ಕೊಟ್ಟರೆ, ಶಾಮನೂರು ಮಲ್ಲಿಕಾರ್ಜುನ ಮಗನಿಗೆ ಬಿಜೆಪಿ ಟಿಕೆಟ್ ಕೊಟ್ಟರೂ ಆಶ್ಚರ್ಯವಿಲ್ಲ. ನೂರಕ್ಕೆ ನೂರರಷ್ಟು ಮಾಹಿತಿ ನನಗಿದೆ ಎಂದು ಯತ್ನಾಳ್ ಬಾಂಬ್ ಸಿಡಿಸಿದ್ದಾರೆ.

ಯತ್ನಾಳ್ ಬಿಜೆಪಿಗೆ ಏಕೆ ಬೇಕೆಂದು ಕೆಲವರು ಪೋಸ್ಟ್ ಮಾಡುತ್ತಾರೆ. ಇದೆಲ್ಲಾ ಕೆಲಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಕಲಿ ಫೇಸ್ ಬುಕ್ ಮೂಲಕ ಮಾಡಿಸುತ್ತಾನೆ. ಬಿ.ಎಲ್ ಸಂತೋಷ್, ಪ್ರಲ್ಹಾದ್ ಜೋಶಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಹಾಕಿಸುತ್ತಾನೆ. ಇದಕ್ಕಾಗಿ ಪ್ರತಿ ತಿಂಗಳು 50 ಲಕ್ಷ ರೂ ಖರ್ಚು ಮಾಡುತ್ತಾನೆಂದು ವಾಗ್ದಾಳಿ ಮಾಡಿದರು. ತಾಯಿಗೆ ದ್ರೋಹ ಬಗೆಯಲ್ಲಾ ಎಂದು ನಿಮ್ಮಪ್ಪ ಭಾಷಣ ಮಾಡುತ್ತಿದ್ದ. ಅದನ್ನೇ ನೋಡಿ ಕನ್ನಡಿ ಮುಂದೆ ನಿಂತು ಭಾಷಣ ಕಲಿತಿದ್ದೀಯಾ, ನಿನಗೆ ಹಣ ತಿನ್ನೋದು ಮಾತ್ರ ಗೊತ್ತಿದೆ ಎಂದು ವಿಜಯೇಂದ್ರ ವಿರುದ್ದ ಕಿಡಿಕಾರಿದರು. ಈಗ ಉಪ ಚುನಾವಣೆಯಲ್ಲಿ ನೀನು ಬಾಗಲಕೋಟೆ, ದಾವಣಗೆರಯಲ್ಲಿ ಸರಿಯಾಗಿ ಕೆಲಸ ಮಾಡಬೇಕು. ಇಲ್ಲವಾದರೆ ಶಾಮನೂರು ಜೊತೆ ಹೋಗಬೇಕಾಗುತ್ತದೆ ಎಂದಿದ್ದಾರೆ.

ಕುಮಾರಸ್ವಾಮಿಯನ್ನು ಸೋಲಿಸಲು ಪ್ರಯತ್ನ ಮಾಡಿದರು, ಸೋಮಣ್ಣರನ್ನು ಸೋಲಿಸಲು ಪ್ರಯತ್ನ ಮಾಡಿದ್ದರು. ಕೊಪ್ಪಳದಲ್ಲಿ ಡೀಲಿಂಗ್, ಶಿಖಾರಿಪುರದಲ್ಲಿ ಡೀಲಿಂಗ್, ಕಲಬುರಗಿಯಲ್ಲೂ ಸೋಲಲು ಹೊಂದಾಣಿಕೆ ಮಾಡಿಕೊಂಡರು. ರಾಯಚೂರು, ಬಳ್ಳಾರಿ, ಕೊಪ್ಫಳದಲ್ಲೂ ಹೊಂದಾಣಿಕೆ ಮಾಡಿದರು. ಇದೆಲ್ಲಾ ಮುಂದೆ ನಡೆಯಲ್ಲ. ಯಡಿಯೂರಪ್ಪ ಇದ್ದರೆ ಲಿಂಗಾಯತ ಇರುತ್ತಾರೆ, ಇಲ್ಲದಿದ್ದರೆ ಇಡಿ ಕರ್ನಾಟಕ ಬಿಜೆಪಿ ಮುಳುಗುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿಗಳು ಹೇಳುವುದನ್ನು ನಂಬಿ ಪಿಎಂ ಮೋದಿ, ಅಮೀತ್ ಶಾ, ಬಿಜೆಪಿ ಹೈಕಮಾಂಡ್ ಕಣ್ಣು ಮುಚ್ಚಬಾರದು ಎಂದರು.

Tags:

error: Content is protected !!