ನಿಪ್ಪಾಣಿಯ ಪುಣೆ-ಬೆಂಗಳೂರ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ ಕಾಮಗಾರಿ ವೇಳೆ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನದ ಮುಂದಿನ ಭಾಗ ನುಜ್ಜುಗುಜ್ಜಾಗಿದೆ.
ಫ್ಲೈಓವರ ಕಾಮಗಾರಿಯಿಂದ ಸಂಚಾರ ದಟ್ಟಣೆ ಹೆಚ್ಚಾಗಿದ್ದು.ಕಳೆದ ಒಂದು ತಿಂಗಳಿಂದ ಈ ರಸ್ತೆಯಲ್ಲಿ ಸಣ್ಣಪುಟ್ಟ ಅಪಘಾತ ಸಂಭವಿಸಿವೆ.ಇವತ್ತು ಗಾಂಧಿ ಆಸ್ಪತ್ರೆಯ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನದ ಮುಂದಿನ ನುಜ್ಜುಗುಜ್ಜಾಗಿದೆ.ಸವಾರನಿಗೆ ಯಾವುದೇ ಗಾಯಗಳಾಗಿಲ್ಲ.ಸವಾರನ ಹೆಸರು ತಿಳಿದು ಬಂದಿಲ್ಲ.
ಅಪಘಾತ ನಂತರ ಸಂಚಾರ ಅಸ್ತವ್ಯಸ್ತಗೊಂಡಿತ್ತು.
