ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಕ್ಕೆ 100 ವರ್ಷಗಳಾದ ಹಿನ್ನೆಲೆಯಲ್ಲಿ, ಸೇವಾ ಭಾರತಿ ಟ್ರಸ್ಟ್ ವತಿಯಿಂದ ಧಾರವಾಡದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸೇವಾ ಭಾರತಿ ಟ್ರಸ್ಟಿ ಮಂಜುನಾಥ ಮಕ್ಕಳಗೇರಿ ಹೇಳಿದರು.
ವೈ- ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ರಕ್ತದಾನ ಶಿಬಿರ ಧಾರವಾಡದ ಹಳಿಯಾಳ ರಸ್ತೆಯಲ್ಲಿರುವ ಲಿಂಗಾಯತ ಭವನದಲ್ಲಿ ನಡೆಯಲಿದೆ. ಮಾ.23 ರಂದು ಬೆಳಿಗ್ಗೆ 6 ರಿಂದ ಸಂಜೆ 7 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದೆ. ಈ ದಿನ ಸುಮಾರು ಎರಡೂವರೆ ಸಾವಿರ ಜನ ರಕ್ತದಾನ ಮಾಡಲಿದ್ದಾರೆ. ರಕ್ತಹೀನತೆ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರೆಗೆ ರಕ್ತದ ನೆರವು ನೀಡುವ ಉದ್ದೇಶದಿಂದ ಹಾಗೂ ರಕ್ತದಾನದ ಮಹತ್ವವನ್ನು ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಈ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಈಗಾಗಲೇ 1800 ಜನ ರಕ್ತದಾನ ಮಾಡಲು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದರು. ಜತೆಗೆ ಆರ್ಎಸ್ಎಸ್ಗೆ 100 ವರ್ಷಗಳಾದ ಹಿನ್ನೆಲೆ ಈ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಮಾಡುವ ಉದ್ದೇಶದಿಂದ ಈ ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ಮಂಜುನಾಥ ಮಕ್ಕಳಗೇರಿ ಹೇಳಿದರು.
