BELAGAVI

ಬೆಳಗಾವಿಯಲ್ಲಿ ಗಾಂಜಾ ಅಡ್ಡೆ ಮೇಲೆ ಸಿಸಿಟಿ ದಾಳಿ: ಓರ್ವನ ಬಂಧನ, ಕಿಲೋಕ್ಕೂ ಅಧಿಕ ಮಾದಕ ದ್ರವ್ಯ ಜಪ್ತಿ

Share

ಬೆಳಗಾವಿಯ ಜೈತುನ್ ಮಾಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಗಡಿ ಭಾಗದಿಂದ ಗಾಂಜಾ ತಂದು ಬೆಳಗಾವಿಯಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಟಿ ವಿಭಾಗದ ಪಿಐ ಮಂಜುನಾಥ ನಾಯಕ ನೇತೃತ್ವದ ತಂಡ ಭೇದಿಸಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಜೈತುನ್ ಮಾಳದ ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು, ಪೀರನವಾಡಿಯ ಮಾನಸ ಮನೋಹರ ಕದಮ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಮತ್ತೊಬ್ಬ ಆರೋಪಿ ರಿತಿಕ ಪಾಟೀಲ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಯಿಂದ ಸುಮಾರು 55,000 ರೂಪಾಯಿ ಮೌಲ್ಯದ 1 ಕೆಜಿ 100 ಗ್ರಾಂ ಗಾಂಜಾ, ಡಿಜಿಟಲ್ ತೂಕದ ಯಂತ್ರ ಹಾಗೂ ಮೊಬೈಲ್ ಸೇರಿದಂತೆ ಒಟ್ಟು 63,600 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಮಧ್ಯಪ್ರದೇಶದ ಸುನೀಲ ಎಂಬಾತನಿಂದ ಈ ಗಾಂಜಾ ಸರಬರಾಜಾಗುತ್ತಿತ್ತು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಯಶಸ್ವಿ ದಾಳಿ ನಡೆಸಿದ ಸಿಬ್ಬಂದಿಯ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಅವರು ಶ್ಲಾಘಿಸಿದ್ದಾರೆ.

Tags:

error: Content is protected !!