Nippani

ಕುಡಿಯುವ ನೀರಿಗಾಗಿ ಸಂಕಷ್ಟ ಪಿಡಿಓ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರ ಆಕ್ರೋಶ

Share

ನಿಪ್ಪಾಣಿ ತಾಲ್ಲೂಕಿನ ಶೆಂಡೂರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಿರ್ಲಕ್ಷ್ಯದಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಗ್ರಾಮದಲ್ಲಿ 15 ದಿನಕ್ಕೊಮ್ಮೆ ಮಾತ್ರ ಕುಡಿಯುವ ನೀರು ಸರಬರಾಜಾಗುತ್ತಿದೆ. ಇದರಿಂದ ಬೇಸತ್ತ ಜನರು ಮೂರು ಕಿಲೋಮೀಟರ್ ದೂರ ನಡೆದು ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ.
ನೀರು ಬೇಕಾದರೆ 600 ರಿಂದ 800 ರೂಪಾಯಿ ಖರ್ಚು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಬಡ ಜನರಿಗೆ ಇದು ದೊಡ್ಡ ಹೊರೆ ಆಗಿದೆ.

ಕರ ವಸೂಲಿಗೆ ಅಧಿಕಾರಿಗಳು ಬಂದಾಗ ಕೆಲಸ ಮಾಡುತ್ತೇವೆ ಎಂದು ಅಧಿಕಾರಿಗಳು ಹೇಳುತ್ತಾರೆ ಅಂತೆ.
ಗ್ರಾಮದಲ್ಲಿ ಬಾವಿ ಇದ್ದರೂ ಅದರ ಸರಿಯಾದ ನಿರ್ವಹಣೆ ಇಲ್ಲ. ಸ್ವಲ್ಪ ದುರಸ್ತಿ ಮಾಡಿದರೆ ಸಮಸ್ಯೆ ಪರಿಹಾರವಾಗುತ್ತೆ.
ಬಾವಿಯ ಪಕ್ಕದಲ್ಲಿರುವ ಬೋರ್‌ವೆಲ್ ಕೂಡ ದುರಸ್ತಿ ಮಾಡಿಲ್ಲ. ಇದರಿಂದ ನೀರಿನ ಮೂಲಗಳು ಇದ್ದರೂ ಬಳಕೆಗೆ ಸಿಗುತ್ತಿಲ್ಲ ಸ್ಥಳೀಯರು ಆರೋಪಿಸಿದ್ದಾರೆ.

ಒಟ್ಟಾರೆ, ಪಿಡಿಓ ನಿರ್ಲಕ್ಷ್ಯದಿಂದ ಶೆಂಡೂರ ಗ್ರಾಮದಲ್ಲಿ ನೀರಿಗಾಗಿ ಜನರು ನರಳುತ್ತಿದ್ದಾರೆ. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

Tags:

error: Content is protected !!