bagalkot

ಬಾಗಲಕೋಟೆಯಲ್ಲಿ ರಂಜಾನ್ ಸಡಗರ: ಈದ್ಗಾ ಮೈದಾನದಲ್ಲಿ ‘ಕೈ’ ಸಂಭಾವ್ಯ ಅಭ್ಯರ್ಥಿ ಉಮೇಶ್ ಮೇಟಿ ಪ್ರಾರ್ಥನೆ!

Share

ಬಾಗಲಕೋಟೆಯಲ್ಲಿ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಮುಸ್ಲಿಂ ಬಾಂಧವರ ಜೊತೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಉಮೇಶ್ ಮೇಟಿ ಹಬ್ಬ ಆಚರಿಸಿದ್ದಾರೆ. ನವನಗರದ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.

ಬಾಗಲಕೋಟೆ ಉಪಚುನಾವಣೆಯ ಟಿಕೆಟ್ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಉಮೇಶ್ ಮೇಟಿ, ಇಂದು ನವನಗರದ ಈದ್ಗಾ ಮೈದಾನಕ್ಕೆ ಭೇಟಿ ನೀಡಿ ಎಲ್ಲರ ಗಮನ ಸೆಳೆದರು.

 

ರಂಜಾನ್ ಹಬ್ಬದ ಅಂಗವಾಗಿ ನಡೆದ ವಿಶೇಷ ಪ್ರಾರ್ಥನೆಯಲ್ಲಿ ಮುಸ್ಲಿಂ ಬಾಂಧವರೊಂದಿಗೆ ಭಾಗಿಗಳಾದ ಅವರು, ಜಿಲ್ಲೆಯ ಶಾಂತಿ ಮತ್ತು ಅಭಿವೃದ್ಧಿಗಾಗಿ ದುವಾ ಮಾಡಿದರು. ಟಿಕೆಟ್ ಘೋಷಣೆಯ ಹೊಸ್ತಿಲಲ್ಲಿರುವಾಗಲೇ ಉಮೇಶ್ ಮೇಟಿ ಅವರು ಈ ರೀತಿ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವುದು ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.ಈ ಸಂದರ್ಭದಲ್ಲಿ ಉಮೇಶ್ ಮೇಟಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಸಾಥ್ ನೀಡಿದ್ದು, ಮುಸ್ಲಿಂ ಸಮುದಾಯದ ಮುಖಂಡರಿಗೆ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಚುನಾವಣಾ ಅಖಾಡ ಸಜ್ಜಾಗುತ್ತಿರುವ ಬೆನ್ನಲ್ಲೇ ಸಂಭಾವ್ಯ ಅಭ್ಯರ್ಥಿ ಉಮೇಶ್ ಮೇಟಿ ಅವರು ಅಲ್ಪಸಂಖ್ಯಾತ ಸಮುದಾಯದ ವಿಶ್ವಾಸ ಗಳಿಸಲು ಮುಂದಾಗಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಹಬ್ಬದ ನೆಪದಲ್ಲಿ ಮತದಾರರ ಮನ ಗೆಲ್ಲಲು ‘ಕೈ’ ಪಡೆ ಈ ಮೂಲಕ ಮಾಸ್ಟರ್ ಪ್ಲಾನ್ ಮಾಡಿದೆ ಎನ್ನಲಾಗುತ್ತಿದೆ.

Tags:

error: Content is protected !!