Bagalkot

ಚುನಾವಣಾ ಫೈಟ್: ಬಾಗಲಕೋಟೆಯಲ್ಲಿ ಖಾಕಿ ಭರ್ಜರಿ ಬೇಟೆ; ದಾಖಲೆಯಿಲ್ಲದ ₹32.50 ಲಕ್ಷ ನಗದು ವಶ!

Share

ಬಾಗಲಕೋಟೆ ಉಪಚುನಾವಣೆಯ ಕಾವು ಏರುತ್ತಿದ್ದಂತೆಯೇ ಅಕ್ರಮ ಹಣದ ಓಡಾಟವೂ ಶುರುವಾಗಿದೆ. ಇಂದು ಬೆಳಗಿನ ಜಾವ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 32.50 ಲಕ್ಷ ರೂಪಾಯಿ ಹಣ ಸಿಕ್ಕಿಬಿದ್ದಿದ್ದು, ನೀತಿ ಸಂಹಿತೆ ಉಲ್ಲಂಘಿಸಿದವರ ಎದೆಯಲ್ಲಿ ನಡುಕ ಹುಟ್ಟಿಸಿದೆ.

ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯನ್ನು ಗಾಳಿಗೆ ತೂರಿ, ಅಕ್ರಮವಾಗಿ ಸಾಗಿಸುತ್ತಿದ್ದ 32,50,000 ರೂಪಾಯಿ ನಗದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇಂದು ಬೆಳಗಿನ ಜಾವ ಅಂದಾಜು ನಾಲ್ಕು ಗಂಟೆಯ ಸುಮಾರಿಗೆ ನಗರದ ಹೊರವಲಯದ ಹೊನ್ನಾಕಟ್ಟಿ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ಈ ಕಾರ್ಯಾಚರಣೆ ನಡೆದಿದೆ. ಚುನಾವಣಾ ಅಕ್ರಮ ತಡೆಯಲು ನಿಯೋಜನೆಗೊಂಡಿದ್ದ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದಾಗ, ದಾಖಲೆಗಳಿಲ್ಲದ ಈ ಭಾರಿ ಮೊತ್ತ ಪತ್ತೆಯಾಗಿದೆ.

ದಾಖಲೆ ರಹಿತ ಹಣವನ್ನು KA-36 P-3991 ನೋಂದಣಿ ಸಂಖ್ಯೆಯ ಮಾರುತಿ ಎರ್ಟಿಗಾ ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹಣದೊಂದಿಗೆ ವಾಹನವನ್ನು ಜಪ್ತಿ ಮಾಡಿದ್ದಾರೆ. ಈ ಹಣ ಯಾರಿಗೆ ಸೇರಿದ್ದು ಮತ್ತು ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆ ಅಧಿಕಾರಿಗಳು ತೀವ್ರ ತನಿಖೆ ಕೈಗೊಂಡಿದ್ದು, ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

Tags:

error: Content is protected !!