ಬೆಳಗಾವಿ ತಾಲೂಕಿನ ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರೋಚಕ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು

. ಸಚಿವ ಸತೀಶ ಜಾರಕೀಹೊಳಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕ್ರೀಡಾಕೂಟವು ಗ್ರಾಮಸ್ಥರ ಮತ್ತು ಕ್ರೀಡಾಭಿಮಾನಿಗಳ ಗಮನ ಸೆಳೆಯಿತು.


ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಅಣ್ಣಾ ಜಾರಕೀಹೊಳಿ, ಚಿಕ್ಕೋಡಿ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕೀಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕೀಹೊಳಿ ಅವರ ನೇತೃತ್ವದಲ್ಲಿ ಕಡೋಲಿ ಗ್ರಾಮದಲ್ಲಿ ಅದ್ದೂರಿ ಕುಸ್ತಿ ಪಂದ್ಯಾವಳಿ ಜರುಗಿತು. ಸಚಿವರ ಆಪ್ತ ಸಹಾಯಕರು ಹಾಗೂ ಕೆಪಿಸಿಸಿ ಸದಸ್ಯರಾದ ಮಲಗೌಡಾ ಪಾಟೀಲ ಮತ್ತು ಬೆಳಗಾವಿ ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಮ್.ಜೆ. ಅವರ ಮೇಲ್ವಿಚಾರಣೆಯಲ್ಲಿ ಈ ಕ್ರೀಡಾ ಉತ್ಸವ ಯಶಸ್ವಿಯಾಗಿ ನೆರವೇರಿತು.

ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಪಂದ್ಯಾವಳಿಯಲ್ಲಿ ವಿವಿಧ ಭಾಗಗಳ ಕುಸ್ತಿ ಪಟುಗಳು ಭಾಗವಹಿಸಿ ತಮ್ಮ ಬಲ ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಕಡೋಲಿ ಗ್ರಾಮದ ನೂರಾರು ಸಂಖ್ಯೆಯ ಗ್ರಾಮಸ್ಥರು ಉಪಸ್ಥಿತರಿದ್ದು ಕ್ರೀಡಾಪಟುಗಳನ್ನು ಹುರಿದುಂಬಿಸಿದರು. ಜಾರಕೀಹೊಳಿ ಕುಟುಂಬದ ಈ ಕ್ರೀಡಾ ಪ್ರೇಮಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

