ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ಇಂದು ಮಳೆರಾಯ ಅಬ್ಬರಿಸಿದ್ದಾನೆ. ನಂದಗಡ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಸುರಿದಿದ್ದು, ಪ್ರಕೃತಿಯ ಈ ವಿಸ್ಮಯಕ್ಕೆ ಜನ ಬೆಚ್ಚಿಬಿದ್ದಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನಾದ್ಯಂತ ಇಂದು ವರುಣನ ಅಬ್ಬರ ಜೋರಾಗಿದ್ದು, ಖಾನಾಪೂರ ಪಟ್ಟಣ ಹಾಗೂ ನಂದಗಡ ಸುತ್ತಮುತ್ತಲಿನ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಏಕಾಏಕಿ ಸುರಿದ ಈ ಭಾರೀ ಮಳೆಯಿಂದಾಗಿ ಇಡೀ ಪ್ರದೇಶ ಬಿಳಿಮಯವಾಗಿದ್ದು, ರಸ್ತೆ ಹಾಗೂ ಹೊಲಗದ್ದೆಗಳಲ್ಲಿ ಆಲಿಕಲ್ಲುಗಳು ಹರಡಿಕೊಂಡಿವೆ. ಅಕಾಲಿಕವಾಗಿ ಬಂದ ಈ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಆಲಿಕಲ್ಲಿನ ಮಳೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
