Chikkodi

ಬೈಕ್ ಗಳ ನಡುವೆ ಭೀಕರ ಅಪಘಾತ: ಇಬ್ಬರಿಗೆ ಗಂಭೀರ ಗಾಯ

Share

:ಪಟ್ಟಣದ ಹೊರವಲಯದಲ್ಲಿ ರಾತ್ರಿ ಸಂಭವಿಸಿದ ಎರಡು ಬೈಕ್‌ಗಳ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಅಪ್ಪಾಸಾಬ ಲಕ್ಷ್ಮಣ ಕಾಳೆ ಮತ್ತು ಮೀರಾಸಾಬ್ ಮುಲ್ತಾನಿ ಎಂಬ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಚಿಕ್ಕೋಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Tags:

error: Content is protected !!