BELAGAVI

ಚಚಡಿಯಲ್ಲಿನ ಮದ್ಯದಂಗಡಿಗಳನ್ನು ಬಂದ್ ಮಾಡಿ – ಸಂಸಾರಗಳನ್ನು ಉಳಿಸಿ…

Share

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಾರೂಗೊಪ್ಪದಲ್ಲಿ ಮದ್ಯದ ಅಂಗಡಿಗಳ ಹಾವಳಿ ಮಿತಿ ಮೀರಿದ್ದು, ಇಂದು ನೂರಾರು ಮಹಿಳೆಯರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿದರು. ಕುಡಿತದಿಂದ ಸಂಸಾರಗಳು ಬೀದಿಗೆ ಬರುತ್ತಿವೆ ಎಂದು ಆಕ್ರೋಶ ಹೊರಹಾಕಿದ ಮಹಿಳೆಯರು, ಕೂಡಲೇ ಸಾರಾಯಿ ಅಂಗಡಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿದರು.

ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಪ್ರತಿಭಟನೆಯನ್ನು ನಡೆಸಿದ ಮಹಿಳೆಯರು ಸಾರಾಯಿ ಅಂಗಡಿಗಳನ್ನು ಮಾಡಬೇಕೆಂದು ಆಗ್ರಹಿಸಿದರು.

ನಂತರ ಬೆಳಗಾವಿಯ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ ಬಳಿಕ ಮಾತನಾಡಿದ ಮಹಿಳೆಯರು, ಆಕ್ರೋಶ ವ್ಯಕ್ತಪಡಿಸಿದರು. ಸವದತ್ತಿ ತಾಲೂಕಿನ ಹಾರೂಗೊಪ್ಪ-ಚಚಡಿ ವೃತ್ತದಲ್ಲಿ ಸಾರಾಯಿ ಅಂಗಡಿ ನಿರ್ಮಾಣ ಮಾಡಿದ್ದು, ಮದ್ಯ ಸೇವಿಸಿ ನಶೆಯಲ್ಲಿ ರಸ್ತೆ ದಾಟಿ ಬರುವಾಗ ಅಪಘಾತಗಳು ಸಂಭವಿಸಿದರೇ, ಯಾರೂ ಹೊಣೆ? ಪ್ರತಿದಿನ ಕುಡಿದು ಬರುವವರು ಮನೆಯಲ್ಲಿ ಜಗಳವಾಡುತ್ತಿದ್ದಾರೆ. ಮನೆಯಲ್ಲಿ ಆರ್ಥಿಕತೆ ಕುಸಿಯುತ್ತಿದೆ. ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಅಲ್ಲದೇ ಸಣ್ಣ ಸಣ್ಣ ಅಂಗಡಿಗಳಲ್ಲಿಯೂ ಸಾರಾಯಿ ಮಾರಾಟ ಮಾಡುತ್ತಿರುವುದನ್ನು ಬಂದ್ ಮಾಡಲೇಬೇಕೆಂದು ಮಹಿಳೆಯರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಚಚಡಿ ಗ್ರಾಮದ ನೂರಾರು ಮಹಿಳೆಯರು ಭಾಗಿಯಾಗಿದ್ಧರು.

Tags:

error: Content is protected !!