Athani

ಅಥಣಿಯಲ್ಲಿ ಅಗ್ನಿ ಅವಾಂತರ: ಏಕಾಏಕಿ ಸ್ಫೋಟಗೊಂಡ ಟಿ.ಸಿ, ಸುಟ್ಟು ಭಸ್ಮವಾದ ಎರಡು ದ್ವಿಚಕ್ರ ವಾಹನಗಳು!

Share

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಜನನಿಬಿಡ ಪ್ರದೇಶದಲ್ಲಿ ವಿದ್ಯುತ್ ಪರಿವರ್ತಕ (TC) ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲಿದ್ದ ವಾಹನಗಳು ಅಗ್ನಿಗೆ ಆಹುತಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ಅಥಣಿ ಪಟ್ಟಣದ ಕುಂಭಾರ ಬಾವಿ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ವಿದ್ಯುತ್ ಪರಿವರ್ತಕ (TC) ಏಕಾಏಕಿ ಭೀಕರವಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಟಿ.ಸಿ. ಕೆಳಗಡೆ ನಿಲ್ಲಿಸಲಾಗಿದ್ದ ಎರಡು ಬೈಕ್‌ಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್, ಘಟನೆ ನಡೆದ ಸಮಯದಲ್ಲಿ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸದೆ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಸ್ಕಾಂ (HESCOM) ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಹಳೆಯದಾದ ಟಿ.ಸಿ.ಗಳನ್ನು ಬದಲಿಸುವಂತೆ ಒತ್ತಾಯಿಸಿದ್ದಾರೆ.

Tags:

error: Content is protected !!