ಪ್ರಾಥಮಿಕ ಆರೋಗ್ಯ ಕೇಂದ್ರಗಳು ಎಂದರೆ ಚಿಕ್ಕದಾಗಿ ಸೌಲಭ್ಯಗಳನ್ನು ಹೊಂದದೇ ಇರುವ ಕಟ್ಟಡಗಳು ಎಷ್ಟೋ ಇವೆ. ಆದ್ರೆ ಸುಮಾರು ರೂ. 2.ಕೋಟಿ 50 ಲಕ್ಷ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿದೆ.

ಹೌದು ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಈ ಆರೋಗ್ಯ ಕೇಂದ್ರ ನಿರ್ಮಿಸಲಾಗಿದೆ. ಕೆಲವು ಸಣ್ಣ ಪುಟ್ಟ ಕೆಲಸಗಳು ಬಾಕಿಯಿದ್ದು ಶೀಘ್ರದಲ್ಲೇ ಅವುಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

