BELAGAVI

ಬೆಳಗಾವಿಯ ಡಾ. ಅಂಬೇಡ್ಕರ್ ನಗರದಲ್ಲಿ ಬಾಬಾಸಾಹೇಬರ ಜಯಂತ್ಯೋತ್ಸವಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Share

ಬೆಳಗಾವಿಯ ಡಾ. ಬಾಬಾಸಾಹೇಬ್ ಅಂಬೇಡ್ಕರ್ ನಗರದಲ್ಲಿ 135ನೇ ಜಯಂತ್ಯೋತ್ಸವದ ಪೂರ್ವಭಾವಿ ಸಿದ್ಧತೆಗಳು ಅಧಿಕೃತವಾಗಿ ಚಾಲನೆ ಪಡೆದುಕೊಂಡಿವೆ. ಜೈ ಭೀಮ್ ಅಭಿವೃದ್ಧಿ ಮಂಡಳ ಹಾಗೂ ಜ್ಯೋತಿಬಾ ಫೂಲೆ ಯುವಕ ಮಂಡಳದ ವತಿಯಿಂದ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಈ ಬಾರಿ ಅದ್ಧೂರಿ ಆಚರಣೆಗೆ ನಿರ್ಧರಿಸಲಾಗಿದೆ.

ಬೆಳಗಾವಿಯ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ನಗರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ 135ನೇ ಜಯಂತ್ಯೋತ್ಸವದ ನಿಮಿತ್ತ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಜೈ ಭೀಮ್ ಅಭಿವೃದ್ಧಿ ಮಂಡಳ ಹಾಗೂ ಜ್ಯೋತಿಬಾ ಫೂಲೆ ಯುವಕ ಮಂಡಳದ ಜಂಟಿ ಆಶ್ರಯದಲ್ಲಿ ನಡೆದ ಈ ಸಭೆಯಲ್ಲಿ, ಜಯಂತಿಯನ್ನು ಅತ್ಯಂತ ಶಿಸ್ತುಬದ್ಧವಾಗಿ ಮತ್ತು ವಿಜೃಂಭಣೆಯಿಂದ ಆಚರಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.

ಈ ಬಾರಿಯ ಜಯಂತ್ಯೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಸಚೀನ್ ಕುರಣೆ ಹಾಗೂ ಉಪಾಧ್ಯಕ್ಷರಾಗಿ ಉಮೇಶ್ ಮಾಳಗಿಮನಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಉಳಿದಂತೆ ಕಾರ್ಯದರ್ಶಿಯಾಗಿ ವೆಂಕಟೇಶ್ ಆದಿಆಂಧ್ರ, ಖಜಾಂಚಿಯಾಗಿ ವಿವೇಕ್ ರಾವ್ ಮತ್ತು ಉಪ ಖಜಾಂಚಿಯಾಗಿ ಗುಂಡು ಗುಂಡಪ್ಪನವರ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆಯ್ಕೆಯಾದ ನೂತನ ಪದಾಧಿಕಾರಿಗಳು ಈ ಬಾರಿ ಎಲ್ಲರ ವಿಶ್ವಾಸದೊಂದಿಗೆ ಅತ್ಯಂತ ಅದ್ಧೂರಿಯಾಗಿ ಅಂಬೇಡ್ಕರ್ ಜಯಂತಿಯನ್ನು ಆಚರಿಸುವುದಾಗಿ ಘೋಷಿಸಿದ್ದಾರೆ.

Tags:

error: Content is protected !!