Vijaypura

ಸಿಎಂ ಸಿದ್ದರಾಮಯ್ಯ ಆಲಮಟ್ಟಿಯಲ್ಲಿಂದು ವಾಸ್ತವ್ಯ; ಪೊಲೀಸ್‌ ಬಿಗಿ ಬಂದೋಬಸ್ತ್

Share

: ಬಾಗಲಕೋಟೆ ಉಪ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆಲಮಟ್ಟಿಗೆ ಆಗಮಿಸುತ್ತಿರುವ ಕಾರಣ, ಭದ್ರತಾ ದೃಷ್ಟಿಯಿಂದ ಪ್ರವಾಸಿಗರಿಗೆ ಆಲಮಟ್ಟಿ ಜಲಾಶಯಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕೆಬಿಜೆಎನ್ ಎಲ್ ಅಧಿಕಾರಿಗಳು ಜಲಾಶಯದ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಿದ್ದು, ಮುಖ್ಯ ದ್ವಾರದಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಮುಖ್ಯಮಂತ್ರಿಗಳು ಇಂದು ಆಲಮಟ್ಟಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Tags:

error: Content is protected !!