Belagavi

ಬೆಳಗಾವಿಯಲ್ಲಿ ಸಿಸಿಬಿ ಭರ್ಜರಿ ಬೇಟೆ: ಗಾಂಜಾ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ

Share

• ಬೆಳಗಾವಿ ಸಿಸಿಬಿ ಪೊಲೀಸರಿಂದ ಮಿಂಚಿನ ದಾಳಿ
• ಒಂದು ಲಕ್ಷ ಮೌಲ್ಯದ ಗಾಂಜಾ ಜಪ್ತಿ
• ಇಬ್ಬರು ಆರೋಪಿಗಳು ಸಿಸಿಬಿ ಬಲೆಗೆ ಸಾವು
• ಅಕ್ರಮ ದಂಧೆಯ ಅಂತರರಾಜ್ಯ ಸಂಪರ್ಕ ಪತ್ತೆ

ಬೆಳಗಾವಿ ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಜಾಲದ ಮೇಲೆ ಸಿಸಿಬಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಮಚ್ಚೆ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆಯನ್ನು ಭೇದಿಸಿರುವ ಪೊಲೀಸರು, ಲಕ್ಷಾಂತರ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

ಬೆಳಗಾವಿ ನಗರ ಸಿಸಿಬಿ ಪೊಲೀಸರು ಸೋಮವಾರ ನಡೆಸಿದ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಸಿಬಿ ಇನ್ಸ್‌ಪೆಕ್ಟರ್ ಮಂಜುನಾಥ ನಾಯಕ ಅವರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ, ಮಚ್ಚೆ ಇಂಡಸ್ಟ್ರಿಯಲ್ ಏರಿಯಾದ ಜಾಂಬೋಟಿ ರಸ್ತೆ ಪಕ್ಕದ ಪಾಳು ಬಿದ್ದ ಕಟ್ಟಡದ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಕಂಗ್ರಾಳಿಯ ಬಾಳು ಅಲಿಯಾಸ್ ಮನೋಹರ ಹುದ್ದಾರ ಹಾಗೂ ಸಂತಿ ಬಸ್ತವಾಡದ ಸಚೀನ ಅಂಕಲಗಿ ಎಂಬುವವರು ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.
ಬಂಧಿತರಿಂದ ಅಂದಾಜು 1 ಲಕ್ಷ ರೂಪಾಯಿ ಮೌಲ್ಯದ 2.010 ಕೆ.ಜಿ ಗಾಂಜಾ, ಮೊಬೈಲ್ ಫೋನ್‌ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತನಿಖೆ ವೇಳೆ ಈ ಜಾಲದ ಹಿಂದೆ ಮಹಾರಾಷ್ಟ್ರದ ಅಹಮದ್ ನಗರದ ಮಹಿಳೆ ಹಾಗೂ ಮತ್ತೊಬ್ಬ ವ್ಯಕ್ತಿಯ ಕೈವಾಡವಿರುವುದು ಬೆಳಕಿಗೆ ಬಂದಿದೆ. ಸದ್ಯ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ. ಸಿಸಿಬಿ ತಂಡದ ಈ ಯಶಸ್ವಿ ಕಾರ್ಯಾಚರಣೆಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

Tags:

error: Content is protected !!