BELAGAVI

ಆಟೋ ನಿಲ್ಲಿಸುವ ಸರತಿ ಸಾಲಿಗೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಮಂಗಸೂಳಿಯಲ್ಲಿ ಆಟೋ ಚಾಲಕನ ಭೀಕರ ಹತ್ಯೆ!

Share

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕರ ನಡುವೆ ಉಂಟಾದ ಮನಸ್ತಾಪವೊಂದು ರಕ್ತಪಾತಕ್ಕೆ ಕಾರಣವಾಗಿದೆ. ಆಟೋ ರಿಕ್ಷಾ ನಿಲ್ಲಿಸುವ ಸರತಿ ಸಾಲಿನ ವಿಚಾರವಾಗಿ ನಡೆದ ವಾಗ್ವಾದವು ಕೊಲೆಯಲ್ಲಿ ಅಂತ್ಯವಾಗಿದ್ದು, ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಸೂಳಿ ಗ್ರಾಮದ ನಿವಾಸಿ ಅಶೋಕ ವಡ್ಡರ (27) ಎಂಬುವವರೇ ಕೊಲೆಯಾದ ದುರ್ದೈವಿ. ಸರತಿ ಸಾಲಿನಲ್ಲಿ ಆಟೋ ನಿಲ್ಲಿಸುವ ವಿಷಯದಲ್ಲಿ ಅಶೋಕ ಹಾಗೂ ಇತರ ಚಾಲಕರ ನಡುವೆ ಕಳೆದ ಕೆಲವು ದಿನಗಳಿಂದ ವೈಮನಸ್ಸು ಏರ್ಪಟ್ಟಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳಾದ ಶಿವಾ ವಡ್ಡರ, ಸಾಗರ ವಡ್ಡರ ಹಾಗೂ ವಿನೋದ್ ವಡ್ಡರ ಎಂಬುವವರು ಅಶೋಕನ ತಲೆಗೆ ಮಾರಕಾಸ್ತ್ರದಿಂದ ಬಡೆದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಡೆದ ಈ ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು, ಕಾಗವಾಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!