ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಿದೆ. ಭೂರಣಕಿ ಗ್ರಾಮದ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯ ಭೂರಣಕಿ ಗ್ರಾಮದಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಆರೋಪಿಗಳಾದ ಮೋಶೀನ್ ಕಾಶೀಮಸಾಬ್ ಸಾವಕಾರ (30) ಮತ್ತು ಇರ್ಫಾನ್ ನಿಸಾರ್ ವಸ್ತದ (27) ಎಂಬುವವರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಗೌರವಾನ್ವಿತ ನ್ಯಾಯಾಧೀಶರಾದ ಶ್ರೀಮತಿ ಸಿ.ಎಮ್. ಪುಷ್ಪಲತಾ ಅವರು ಇಬ್ಬರಿಗೂ 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ತಲಾ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಕೀಲರಾದ ಎಲ್.ವಿ. ಪಾಟೀಲ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.
Khanapur
ಅಪ್ರಾಪ್ತೆಯ ಮೇಲೆ ದೌರ್ಜನ್ಯ: ಖಾನಾಪುರದ ಇಬ್ಬರು ಕಾಮುಕರಿಗೆ 3 ವರ್ಷ ಜೈಲು ಶಿಕ್ಷೆ
