BELAGAVI

ಡಿ.ಸಿ.ಸಿ ಬ್ಯಾಂಕ್ ಸಾಧನೆಯ ಹಾದಿ: ಅಣ್ಣಾಸಾಹೇಬ್ ಜೊಲ್ಲೆ ನೇತೃತ್ವದಲ್ಲಿ 56.25 ಕೋಟಿ ಲಾಭ ದಾಖಲೆ

Share

ಬೆಳಗಾವಿ ಜಿಲ್ಲೆಯ ಆರ್ಥಿಕ ಶಕ್ತಿ ಎಂದೇ ಬಿಂಬಿತವಾಗಿರುವ ಡಿ.ಸಿ.ಸಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಬ್ಯಾಂಕಿನ ನಿರ್ದೇಶಕರಾದ ಅಣ್ಣಾಸಾಹೇಬ್ ಜೊಲ್ಲೆ ಅವರು ಇಂದು ಮಾಧ್ಯಮಗೋಷ್ಠಿ ನಡೆಸಿ, ಬ್ಯಾಂಕ್ ಗಳಿಸಿರುವ ಬರೋಬ್ಬರಿ 56.26 ಕೋಟಿ ರೂಪಾಯಿ ಲಾಭ ಹಾಗೂ ರೈತರಿಗಾಗಿ ಜಾರಿಗೆ ತಂದಿರುವ ವಿನೂತನ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ..

ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿ.ಸಿ.ಸಿ) 2025-26ನೇ ಹಣಕಾಸು ವರ್ಷದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಬ್ಯಾಂಕಿನ ನಿರ್ದೇಶಕ ಅಣ್ಣಾಸಾಹೇಬ್ ಜೊಲ್ಲೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ಈ ಬಾರಿ ಒಟ್ಟು 56.25 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ ಎಂದರು. ಬ್ಯಾಂಕಿನ ಠೇವಣಿ ಸಂಗ್ರಹಣೆಯು 6703.36 ಕೋಟಿ ರೂಪಾಯಿಗೆ ತಲುಪಿದ್ದು, ಕಳೆದ ವರ್ಷಕ್ಕಿಂತ 616.30 ಕೋಟಿ ರೂಪಾಯಿ ಅಧಿಕವಾಗಿರುವುದು ಗ್ರಾಹಕರ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.ರೈತರ ಹಿತರಕ್ಷಣೆಯೇ ಬ್ಯಾಂಕಿನ ಮೂಲ ಮಂತ್ರ ಎಂದ ಜೊಲ್ಲೆ ಅವರು, ಜಿಲ್ಲೆಯ 4.77 ಲಕ್ಷ ರೈತರಿಗೆ ಒಟ್ಟು 3818.79 ಕೋಟಿ ರೂಪಾಯಿ ಬೆಳೆ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು. ಅಲ್ಲದೆ, ಬ್ಯಾಂಕನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಈಗಾಗಲೇ 112 ಶಾಖೆಗಳಲ್ಲಿ ಕೋರ್ ಬ್ಯಾಂಕಿಂಗ್ ಜಾರಿಗೊಳಿಸಲಾಗಿದೆ. ಗ್ರಾಹಕರಿಗೆ ತ್ವರಿತ ವ್ಯವಹಾರಕ್ಕಾಗಿ IMPS ಸೌಲಭ್ಯ ಕಲ್ಪಿಸಲಾಗಿದ್ದು, ಅತೀ ಶೀಘ್ರದಲ್ಲಿ UPI ಸೇವೆ ಹಾಗೂ ATM ಮೂಲಕ ಹಣ ಜಮಾ ಮಾಡುವ ಸೌಲಭ್ಯವೂ ಲಭ್ಯವಾಗಲಿದೆ ಎಂದು ವಿವರಿಸಿದರು.

ಇನ್ನು ನಿರ್ದೇಶಕರ ಬಾಲಚಂದ್ರ ಜಾರಕಿಹೊಳಿ ಅವರು ಬ್ಯಾಂಕ್ ಕೇವಲ ಸಾಲ ನೀಡಿಕೆಗೆ ಸೀಮಿತವಾಗದೆ, ಸಾಮಾಜಿಕ ಭದ್ರತೆಗೂ ಒತ್ತು ನೀಡಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಸಹಕಾರಿ ಸಂಘಗಳ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಜೀವ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಸ್ವಸಹಾಯ ಗುಂಪುಗಳಿಗೆ 36.18 ಕೋಟಿ ರೂಪಾಯಿ ಸಾಲ ವಿತರಿಸಲಾಗಿದ್ದು, 5 ಲಕ್ಷದವರೆಗೆ ಶೂನ್ಯ ಬಡ್ಡಿ ದರ ನಿಗದಿಪಡಿಸಲಾಗಿದೆ. ಯಶಸ್ವಿನಿ ಯೋಜನೆಯಡಿ 3.64 ಲಕ್ಷ ರೈತ ಸದಸ್ಯರನ್ನು ನೋಂದಾಯಿಸುವ ಮೂಲಕ ಆರೋಗ್ಯ ಭದ್ರತೆಯನ್ನು ಖಚಿತಪಡಿಸಲಾಗಿದೆ ಎಂದರು.

Tags:

error: Content is protected !!