BELAGAVI

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಮೂಡಲಗಿ ತಾಲೂಕಿನ ಯುವಕನಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ

Share

ಪ್ರೀತಿಯ ನಾಟಕವಾಡಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಸತತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಬೆಳಗಾವಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ನ್ಯಾಯಾಲಯವು 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಮೂಡಲಗಿ ತಾಲೂಕಿನ ಲಕ್ಷ್ಮೀಶ್ವರ ಗ್ರಾಮದ ನಿವಾಸಿ ರಾಜು ಭೀಮಪ್ಪ ದೊಡ್ಡಭೀಮಪ್ಪಗೋಳ (24) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ.

ಬೆಳಗಾವಿ ಜಿಲ್ಲೆಯ ಬೆಳಗಾವಿ ಪೋಕ್ಸೋ ನ್ಯಾಯಾಲಯ-01ರಲ್ಲಿ ನಡೆದ ವಿಚಾರಣೆಯಲ್ಲಿ, ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಆರೋಪಿತ ರಾಜು ಭೀಮಪ್ಪ ದೊಡ್ಡಭೀಮಪ್ಪಗೋಳ ಎಂಬಾತನಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ಮಾನ್ಯ ನ್ಯಾಯಾಧೀಶರಾದ ಶ್ರೀಮತಿ ಸಿ. ಎಂ. ಪುಷ್ಪಲತಾ ಅವರು ಐತಿಹಾಸಿಕ ತೀರ್ಪು ನೀಡಿದ್ದಾರೆ. ಪ್ರಕರಣದ ವಿವರದಂತೆ, ಆರೋಪಿತನು ಬಾಲಕಿಯನ್ನು ಪುಸಲಾಯಿಸಿ ಮೋಟಾರ್ ಸೈಕಲ್ ಮೇಲೆ ಗೋಕಾಕ, ಧಾರವಾಡ, ಶಿರಸಿ, ಬೆಂಗಳೂರು, ಮಂಗಳೂರು ಮತ್ತು ಹುಬ್ಬಳ್ಳಿಗೆ ಕರೆದೊಯ್ದು, ಅಂತಿಮವಾಗಿ ರಾಯಬಾಗದಲ್ಲಿರುವ ತನ್ನ ತಾಯಿಯ ತಮ್ಮನ ಮನೆಯಲ್ಲಿ ಇರಿಸಿಕೊಂಡು ನಿರಂತರವಾಗಿ ಅತ್ಯಾಚಾರ ಎಸಗಿದ್ದನು; ಈ ಕುರಿತು ಕುಲಗೋಡ ಪೊಲೀಸ್ ಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪಿ.ಎಸ್.ಐ ಆನಂದ ಬಿ. ಮತ್ತು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದ ಸಿ.ಪಿ.ಐ ಶ್ರೀಶೈಲ ಬ್ಯಾಕೋಡ ಅವರ ಕಾರ್ಯವೈಖರಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಒಟ್ಟು 9 ಸಾಕ್ಷಿಗಳ ವಿಚಾರಣೆ ಹಾಗೂ 52 ದಾಖಲೆಗಳ ಆಧಾರದ ಮೇಲೆ ಅಪರಾಧ ಸಾಬೀತಾಗಿದ್ದು, ದಂಡದ ಮೊತ್ತ ತುಂಬಲು ತಪ್ಪಿದಲ್ಲಿ ಹೆಚ್ಚುವರಿ 2 ವರ್ಷ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಲಾಗಿದ್ದು, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ ರೂಪಾಯಿ ಪರಿಹಾರ ಧನವನ್ನು 5 ವರ್ಷಗಳ ಕಾಲ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮುದ್ದತ್ತ ಠೇವಣಿಯಾಗಿ ಇಡಲು ಸೂಚಿಸಲಾಗಿದೆ; ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್. ವಿ. ಪಾಟೀಲ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

Tags:

error: Content is protected !!