ವಿಶ್ವರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದ ಅಂಗವಾಗಿ ಬೆಳಗಾವಿಯ ಸರ್ದಾರ್ಸ್ ಮೈದಾನದಲ್ಲಿ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ ಕ್ರಿಕೆಟ್ ಟೂರ್ನಮೆಂಟ್‌ನ ಟ್ರೋಫಿಯನ್ನು ಏಪ್ರಿಲ್ 14 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ತಿಳಿಸಿದರು.
ಅವರು ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದರು. ಏಪ್ರೀಲ್ 14 ರಂದು ವಿಶ್ವರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135 ನೇ ಜಯಂತ್ಯೋತ್ಸವದ ಹಿನ್ನೆಲೆ ಬಾಬಾಸಾಹೇಬ್ ಅಂಬೇಡ್ಕರ್ ಕ್ರಿಕೆಟ್ ಟೂರ್ನಾಮೆಂಟ್ ಆಯೋಜಿಸಲಾಗಿದೆ. ಶಾಲೆಗಳ ಪರೀಕ್ಷೆಗಳು ಪೂರ್ಣಗೊಂಡಿದ್ದು, ಶಾಲೆಗಳಿಗೆ ನೀಡಲಾಗಿದೆ. ಏಪ್ರೀಲ್ 14 ರಂದು ಸಂಜೆ 5 ಗಂಟೆಗೆ ಸದಾರ್ಸ್ ಮೈದಾನದಲ್ಲಿ ಟ್ರೋಫಿ ಅನಾವರಣ ಕಾರ್ಯಕ್ರಮ ನಡೆಯಲಿದೆ. 27-28-29 ರಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿದೆ. ಇದು ಯಾವುದೇ ರಾಜಕೀಯ ಕಾರ್ಯಕ್ರಮವಾಗಿರದೇ, ಎಲ್ಲ ಜನಪ್ರತಿನಿಧಿಗಳು ಎಲ್ಲ ಸಮಾಜದವರು ಪಕ್ಷಾತೀತವಾಗಿ ಭಾಗಿಯಾಗಬೇಕು ಎಂದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಮಲ್ಲೇಶ್ ಚೌಗಲೆ, ಸಿದ್ಧಪ್ಪ ಕಾಂಬಳೆ, ಗಜಾನನ ಧರನಾಯಿಕ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.
