ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಲು ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯಗೊಳಿಸಿ ಹೊರಡಿಸಿ ವಿಧೇಯಕವನ್ನು ವಿರೋಧಿಸಿ ಇಂದು ಬೆಳಗಾವಿಯಲ್ಲಿ ಸಮಸ್ತ ಬೆಳಗಾವಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಚಳುವಳಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಸಮಸ್ತ ಬೆಳಗಾವಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಚಳುವಳಿಯಿಂದ ಪ್ರತಿಭಟನೆಯನ್ನು ನಡೆಸಿ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಲು ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯಗೊಳಿಸಿ ಹೊರಡಿಸಿ ವಿಧೇಯಕವನ್ನು ಹಿಂಪಡೆಯಲು ಒತ್ತಾಯಿಸಲಾಯಿತು.
ಮನವಿಯನ್ನು ಸ್ವೀಕರಿಸಲು ಜಿಲ್ಲಾಧಿಕಾರಿಗಳ ಬದಲೂ ಶಿರಸ್ತೆದಾರರು ಆಗಮಿಸಿದ ಹಿನ್ನೆಲೆ ಪ್ರತಿಭಟನಾಕಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮೊನ್ನೆಯೂ ಕೂಡ ಜಿಲ್ಲಾಧಿಕಾರಿಗಳು ವ್ಯಸ್ಥರಾಗಿದ್ದರು. ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಜಿಲ್ಲಾಧಿಕಾರಿಗಳ ಬಳಿ ಸಮಯವಿಲ್ಲ. ನಮಗೆ ಬೆಲೆಯಿಲ್ಲ ನಾವು ನೀಡಿದ ಮನವಿಗೂ ಬೆಲೆಯಿಲ್ಲದಾಗಿದೆ. ಇದು ನಮ್ಮ ಮೇಲಿನ ಅನ್ಯಾಯವಾಗಿದೆ. ನಮಗಾಗಿ ಒಂದು ಸಭೆಯನ್ನು ಜಿಲ್ಲಾಧಿಕಾರಿಗಳು ಸಭೆ ಕರೆಯಲಿ ಎಂದು ಪಟ್ಟು ಹಿಡಿದರು.
ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಲು ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ. ಆದರೇ ಇದಕ್ಕೆ ಲೈಂಗಿಕ ಅಲ್ಪಸಂಖ್ಯಾತರ ವಿರೋಧವಿದೆ. ಕೂಡಲೇ ಇದನ್ನು ತೊಡೆದು ಹಾಕಬೇಕು. ಬಸ್ಸಿನಲ್ಲಿ ಆಧಾರಕಾರ್ಡ್ ತೋರಿಸಿದರೂ ಉಚಿತ ಪ್ರಯಾಣಕ್ಕೂ ಅನುವು ಮಾಡಿ ಕೊಡುತ್ತಿಲ್ಲ. ಅಲ್ಲಿಯೂ ಕೂಡ ಕಿರಿಕಿರಿಯುಂಟಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮಸ್ತ ಬೆಳಗಾವಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಚಳುವಳಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗಿಯಾಗಿದ್ಧರು.
