State

ಪೊಲೀಸರ ವರ್ಗಾವಣೆ ವಿಚಾರದಲ್ಲಿ ಗೊಂದಲ

Share

ರಾಜ್ಯದಲ್ಲಿ ಎದುರಾಗಿರುವ ಎಲ್.ಪಿ.ಜಿ ಕೊರತೆ ಹಾಗೂ ಪೊಲೀಸ್ ಕಾನ್‌ಸ್ಟೆಬಲ್‌ಗಳ ಅಂತರ್ಜಿಲ್ಲಾ ವರ್ಗಾವಣೆ ವಿಚಾರವಾಗಿ ಗೃಹ ಸಚಿವ ಜಿ. ಪರಮೇಶ್ವರ್ ಇಂದು ಸ್ಪಷ್ಟನೆ ನೀಡಿದ್ದಾರೆ. ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅಭಯ ನೀಡಿದ್ದಾರೆ.

ಎಲ್.ಪಿ.ಜಿ ಸಿಗದೇ ಅನಧಿಕೃತವಾಗಿ ಲಾಕ್’ಡೌನ್ ದಂತಹ ಪರಿಸ್ಥಿತಿ ನಿರ್ಮಾಣವಾದ ಪರಿಸ್ಥಿತಿಯ ಬಗ್ಗೆ ಕೇಳಿದ ಪ್ರಶ್ನೆಗೆ ಗೃಹ ಸಚಿವ ಜಿ. ಪರಮೇಶ್ವರ ಅವರು, ಈಗಾಗಲೇ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ. ಆಹಾರ ಮತ್ತು ನಾಗರೀಕ ಸರಬರಾಜು ಸಚಿವರು ಅಧಿಕಾರದಲ್ಲಿದ್ದಾರೆ. ಚುನಾವಣೆಯ ಬಳಿಕ ಸಿಎಂ ಕೇಂದ್ರಕ್ಕೆ ಕಳುಹಿ ಸಮಸ್ಯೆ ಪರಿಹರಿಸಬಹುದು ಎಂದರು.

ಇನ್ನು ಪೊಲೀಸ್ ಇಲಾಖೆಯ ಅಂತರ್ಜಿಲ್ಲಾ ವರ್ಗಾವಣೆಗೆ ಸಂಬಂಧಿಸಿದಂತೆ ಸುಮಾರು 500 ಪೊಲೀಸ್ ಕಾನ್ಸಟೇಬಲ್’ಗಳು ದಯಾಮರಣಕ್ಕೆ ಕೋರಿರುವ ಪ್ರಶ್ನೆಗೆ ಇದರ ಅವಶ್ಯಕತೆಯಿಲ್ಲ. ಇದಕ್ಕಾಗಿ ಒಂದು ನಿಯಮವಿದೆ. ಅದನ್ನು ಉಲ್ಲಂಘಿಸಿ ವರ್ಗಾವಣೆ ಮಾಡಲು ಬರಲ್ಲ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಪ್ರಾಧಾನ್ಯತೆ ಮೇರೆಗೆ ವರ್ಗಾವಣೆ ಮಾಡಲಾಗುತ್ತದೆ. ನಾವು ನಿಮ್ಮ ನೆರವಿಗಿರುತ್ತೇವೆ. ಸಮಸ್ಯೆ ಸರಿಪಡಿಸ ಕೊಡಲಾಗುವುದು ಎಂದರು.

ಇನ್ನು ಹುಬ್ಬಳ್ಳಿಯ ಲವ್ ಜಿಹಾದ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕ್ರಮಕೈಗೊಂಡು ಬಂಧಿಸಲಾಗಿದೆ. ಇಡೀ ರಾಜ್ಯದಲ್ಲಿ ಇದರ ಪ್ರಚಾರ ಮಾಡುವುದು ಸರಿಯಲ್ಲ. ಎಲ್ಲದ್ದಕ್ಕೂ ಹಿಂದೂ-ಮುಸ್ಲಿಂ ಎನ್ನುವುದು ಸರಿ ಕಾಣಿಸಲ್ಲ. ಆದಷ್ಟು ಇಂತಹ ಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇವೆ. ಕಾನೂನು ರೀತ್ಯಾ ಕ್ರಮಕೈಗೊಳ್ಳುತ್ತೇವೆ ಎಂದರು.

Tags:

error: Content is protected !!