Vijaypura

ಪಂಚಮಸಾಲಿ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರು ಮಹಿಳೆಯಿಂದ ಲೈಂ*ಗಿಕ ಕಿರುಕುಳ ಆರೋಪ; ಮಹಿಳಾ ಆಯೋಗಕ್ಕೆ ದೂರು

Share

ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ, ಸ್ವಾಮೀಜಿ ತಮ್ಮ ತೇಜೋವಧೆ ಮಾಡಲು 3 ಕೋಟಿ ರೂಪಾಯಿಗಾಗಿ ಮಹಿಳೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಪ್ರತಿದೂರು ದಾಖಲಿಸಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್…

ಹೌದು, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪ್ರಮುಖ ನಾಯಕ, ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿರುವ ಪ್ರಕರಣ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಬೆಂಗಳೂರಿನ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿರುವುದಾಗಿ ತಿಳಿದುಬಂದಿದೆ.ಮಹಿಳೆ ನೀಡಿದ ದೂರಿನ ಪ್ರಕಾರ, ಸ್ವಾಮೀಜಿ ತಮ್ಮ ಮೇಲೆ ಅಸಭ್ಯ ವರ್ತನೆ ತೋರಿದ್ದು, ಬೆತ್ತಲೆ ವಿಡಿಯೋ ಕಾಲ್ ಮಾಡುವ ಮೂಲಕ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಆರೋಪಗಳು ಹೊರಬಿದ್ದ ತಕ್ಷಣವೇ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಸ್ವಾಮೀಜಿ ಕಡೆಯಿಂದಲೂ ಪ್ರತಿದೂರು ದಾಖಲಾಗಿರುವುದು ಗಮನಾರ್ಹ ಸಂಗತಿಯಾಗಿದೆ.ಇನ್ನೊಂದೆಡೆ, ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸ್ವಾಮೀಜಿ ತಮ್ಮ ದೂರಿನಲ್ಲಿ, ಸಂಬಂಧಿತ ಮಹಿಳೆ ತಾನು ಅನಾಥಾಶ್ರಮ ನಡೆಸುತ್ತಿರುವುದಾಗಿ ಹೇಳಿ ಪರಿಚಯ ಮಾಡಿಕೊಂಡಿದ್ದಳು ಎಂದು ತಿಳಿಸಿದ್ದಾರೆ.

ಇನ್ನೂ ಮಹಿಳೆ ಬೆಂಗಳೂರು ಕಮಿಷನರ್ ಗೆ ಇ ಮೇಲ್ ಮೂಲಕ ದೂರು ನೀಡಿದ್ದಾರೆ. ಮಹಿಳಾ ಆಯೋಗಕ್ಕೆ ಒಬ್ಬ ವ್ಯಕ್ತಿ ಬಂದು ದೂರು ನೀಡಿದ್ದಾನೆ. ದೂರು ಸ್ವೀಕಾರ ಮಾಡಿದ ಮಹಿಳಾ ಆಯೋಗ ಬಳಿಕ ಮಹಿಳೆ ಹೆಸರು ,ದೂರವಾಣೆ ಸಂಖ್ಯೆ ಸರಿಯಾಗಿ ಕೊಡುವಂತೆ ವ್ಯಕ್ತಿಗೆ ಕೇಳಿದೆ. ನಂತರ ಆ ವ್ಯಕ್ತಿ ಬೇರೆ ದೂರವಾಣೆ ಸಂಖ್ಯೆ ನೀಡಿ ತೆರಳಿದ್ದಾರೆ. ಈ ಬಗ್ಗೆ ಸತ್ಯಾತ್ಯತೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಮಹಿಳಾ ಆಯೋಗದ ಉನ್ನತ ಮೂಲಗಳ ಮಾಹಿತಿ ನೀಡಿದೆ. ಇನ್ನೂ ಮಹಿಳೆ ನೀಡಿರುವ ದೂರಿನಲ್ಲಿ ಏನಿದೆ?
ನಾನು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಭಕ್ತೆಯಾಗಿದ್ದೆ. ವರು ನನ್ನನ್ನು ಮಠಕ್ಕೆ ಕರೆಸಿ “ಪ್ರಸಾದ ಕೊಡುತ್ತೇನೆ” ಎಂದು ಹೇಳಿ ನನ್ನ ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ನನ್ನೊಂದಿಗೆ ದೈಹಿಕವಾಗಿ ತಪ್ಪಾಗಿ ವರ್ತಿಸಿದರು. ಸಮಯದಲ್ಲಿ ನನ್ನ ತಿಳುವಳಿಕೆಯಿಲ್ಲದೆ ವಿಡಿಯೋ ಮಾಡಿಕೊಂಡಿದ್ದಾರೆ. ವಿಡಿಯೋವನ್ನು ಬಳಸಿ ಅವರು ನನ್ನನ್ನು ಬ್ಲಾಕ್ಮೇಲ್ ಮಾಡುತ್ತಿದ್ದು, ಪ್ರತಿ ರಾತ್ರಿ ಫೋನ್ ಮಾಡಿ ಬೆತ್ತಲೆ ವಿಡಿಯೋ ಕಾಲ್ ಮಾಡು, ಇಲ್ಲದಿದ್ದರೆ ನಿನ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತೇನೆ ಎಂದು ಬೆದರಿಸುತ್ತಿದ್ದಾರೆ. ಕಾರಣದಿಂದ ನನಗೆ ಭಯ, ಮಾನಸಿಕ ಒತ್ತಡ ಹಾಗೂ ಅವಮಾನ ಉಂಟಾಗಿದೆ.ಆದ್ದರಿಂದ, ಮೇಲ್ಕಂಡ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ FIR ದಾಖಲಿಸಿ ತನಿಖೆ ನಡೆಸುವಂತೆ ವಿನಂತಿಸುತ್ತೇನೆ. ಎಂದು ಬೆಂಗಳೂರಿನ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಟ್ಟಾರೆ, ಪರಸ್ಪರ ವಿರುದ್ಧ ಆರೋಪ- ಪ್ರತ್ಯಾರೋಪಗಳಿಂದ ಈ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, ಸತ್ಯಾಸತ್ಯತೆ ತಿಳಿಯಲು ಸಮಗ್ರ ತನಿಖೆ ನಡೆಯಬೇಕಿದೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ‌.

Tags:

error: Content is protected !!