ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ತಿಗಡಿ ಗ್ರಾಮದ ಹರಿನಾಳ ಜಲಾಶಯಕ್ಕೆ ನೀರಾವರಿ ಇಲಾಖೆಯ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಲಾಶಯದ ಗುಣಮಟ್ಟ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ ಅಧಿಕಾರಿಗಳು, ಮುಂಬರುವ ದಿನಗಳಲ್ಲಿ ಜಲಾಶಯವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಧಿಕಾರಿ ಲಕ್ಷ್ಮಣ ನಾಯಕ್, “ಜಲಾಶಯವು ಉತ್ತಮ ಸ್ಥಿತಿಯಲ್ಲಿದ್ದು, ಹೂಳೆತ್ತುವ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗುತ್ತಿದೆ,” ಎಂದು ತಿಳಿಸಿದರು. ಇದೇ ವೇಳೆ, ಜಲಾಶಯದ ಆವರಣದಲ್ಲಿ ಅನೈತಿಕ ಚಟುವಟಿಕೆಗಳು ಕಂಡುಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
