ರಾಜ್ಯದಲ್ಲಿ ದ್ವಿಭಾಷಾ ಪದ್ಧತಿ ಜಾರಿಗೆ ತರುವ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ, ಹಿಂದಿ ಭಾಷೆಯನ್ನೂ ತೃತೀಯ ಭಾಷೆಯನ್ನಾಗಿ ಪರಿಗಣಿಸಬೇಕು ಎಂದು ರಾಜ್ಯಪಾಲರು ಹೇಳಿರುವುದನ್ನು ವಿರೋಧಿಸಿ ಧಾರವಾಡದಲ್ಲಿ ಕರವೇ ನಾರಾಯಣ್ಣಗೌಡ ಬಣ್ಣದ ಕಾರ್ಯಕರ್ತರು ಬೀದಿಗೆ ಇಳಿದು ಒ್ರತಿಭಟಬೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕರವೇ ನಾರಾಯಣ್ಣಗೌಡ ಬಣ್ಣದ ಕಾರ್ಯಕರ್ತರು, ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್‍ಯಾಲಿ ನಡೆಸಿದ ಕರವೇ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಕಿಡಿಕಾರಿದರು. ರಾಜ್ಯಪಾಲರು ನಮ್ಮ ರಾಜ್ಯದ ಮೇಲೆ ಹಿಂದಿ ಹೇರಿಕೆ ಮಾಡುತ್ತಿದ್ದಾರೆ. ಈ ರಾಜ್ಯಪಾಲರು ಕನ್ನಡದ ವಿರೋಧಿಯಾಗಿದ್ದಾರೆ. ಇಂತಹ ರಾಜ್ಯಪಾಲರು ನಮಗೆ ಬೇಡ. ಇವರನ್ನು ಬದಲಾಯಿಸಬೇಕು ಎಂದು ಕರವೇ ಕಾರ್ಯಕರ್ತರು ಆಗ್ರಹಿಸಿ. ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದರು.
