ಸಾರ್ವಜನಿಕ ಸ್ಥಳಗಳ ಸೇರಿ ಬೇರೆ ಬೇರೆ ಕಡೆಗಳಲ್ಲಿ ಪಾರ್ಕಿಂಗ್ ಮಾಡಿದ್ದ ಬೈಕಗಳನ್ನು ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ, ಧಾರವಾಡ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಧಾರವಾಡ ಕಮಲಾಪುರ ನಿವಾಸಿ ಶಿವಾನಂದ ಮಾನೆ ಬಂಧಿತ ಬೈಕ ಕಳ್ಳನಾಗಿದ್ದಾನೆ. ಧಾರವಾಡ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಬೈಕ್ ಕಳ್ಳತನ ಪ್ರಕರಣ ಬೆನ್ನು ಬಿದಿದ್ದ ಧಾರವಾಡ ಶಹರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುನಾಥ ಚವ್ಹಾನ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಶಿವಾನಂದ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಬಂಧಿತ ಆರೋಪಿ ಬೇರೆ ಬೇರೆ ಕಡೆಗಳಲ್ಲಿ ಬೈಕ್ ಕಳ್ಳತನ ಮಾಡಿರುವ ವಿಚಾರ ಬೆಂಕಿಗೆ ಬಂದಿದೆ. ಬಂಧಿತನಿಂದ ಸುಮಾರು 2ಲಕ್ಷ35 ಸಾವಿರ ಬೆಲೆಯ 7 ಬೈಕ್‌ಗಳನ್ನು ಈಗ ಪೊಲೀಸರು ಜಪ್ತಿ ಮಾಡಿದ್ದಾರೆ. ವಿಚಾರಣೆ ಪೂರ್ಣಗೊಂಡ ಹಿನ್ನಲೆಯಲ್ಲಿ ಈಗ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಬಳಿಕ, ಅರೋಪಿತನನ್ನು ಕಂಬಿ ಹಿಂದೆ ತಳ್ಳಿದ್ದಾರೆ. ಈ ಕುರಿತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
