Khanapur

ಇಟಗಿ ಗ್ರಾಮದೇವಿ ದೇವಸ್ಥಾನಕ್ಕೆ ಧರ್ಮಸ್ಥಳದಿಂದ ಭರ್ಜರಿ ದೇಣಿಗೆ: 1.5 ಲಕ್ಷ ರೂ. ಚೆಕ್ ಹಸ್ತಾಂತರ

Share

ಖಾನಾಪುರ ತಾಲೂಕಿನ ಇಟಗಿ ಗ್ರಾಮದ ಆರಾಧ್ಯ ದೈವ ಗ್ರಾಮದೇವಿ ದೇವಸ್ಥಾನದ ನೂತನ ನಿರ್ಮಾಣ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆರ್ಥಿಕ ಬಲ ಸಿಕ್ಕಿದೆ. ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ಸಹಾಯಧನದ ಚೆಕ್ ಅನ್ನು ಇಂದು ಅಧಿಕೃತವಾಗಿ ದೇವಸ್ಥಾನದ ಸಮಿತಿಗೆ ಹಸ್ತಾಂತರಿಸಲಾಯಿತು.

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಇಟಗಿ ಗ್ರಾಮದ ಗ್ರಾಮದೇವಿ ದೇವಸ್ಥಾನದ ಪುನರ್ನಿರ್ಮಾಣ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 1.50 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ಈ ಸಹಾಯಧನದ ಚೆಕ್ ಅನ್ನು ತಾಲೂಕು ಯೋಜನಾಧಿಕಾರಿ ಗಣಪತಿ ನಾಯಕ ಅವರು ದೇವಸ್ಥಾನದ ಕಮಿಟಿಯವರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಧರ್ಮಸ್ಥಳ ಕ್ಷೇತ್ರವು ಸದಾ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಉಪಸ್ಥಿತರಿದ್ದು, ಧರ್ಮಸ್ಥಳದ ಈ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದರು.

Tags:

error: Content is protected !!