BELAGAVI

ಈಫಾ ಹೋಟೆಲ್‌ನಲ್ಲಿ ದಟ್ಟ ಹೊಗೆ; ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡದ ಶಂಕೆ !!!??

Share

ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ಪ್ರತಿಷ್ಠಿತ ಈಫಾ ಹೋಟೆಲ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ಸಕಾಲದಲ್ಲಿ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ.

ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಈಫಾ ಹೋಟೆಲ್‌ನಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್‌ನಿಂದ ದಟ್ಟವಾದ ಹೊಗೆ ಬರುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿಗಳು ತಕ್ಷಣವೇ ಗ್ರಾಹಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ, ಘಟನೆಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಸಾರ್ವಜನಿಕರಿಗೆ ಹೋಟೆಲ್ ಸಿಬ್ಬಂದಿಗಳು ಅಡ್ಡಿಪಡಿಸಿ, ಗಲಾಟೆ ಮಾಡಿದ ಘಟನೆಯೂ ವರದಿಯಾಗಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತರುತ್ತಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags:

error: Content is protected !!