Khanapur

ಖಾನಾಪುರ ತಾಲ್ಲೂಕಿನಲ್ಲಿ ಬೇಸಿಗೆ ತರಬೇತಿ ಶಿಬಿರಕ್ಕೆ ಚಾಲನೆ

Share

ಖಾನಾಪುರ ತಾಲ್ಲೂಕಿನ ಉದಯೋನ್ಮುಖ ಕ್ರೀಡಾಪಟುಗಳಿಗಾಗಿ ಸಾಯಿ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಸ್ಕೇಟಿಂಗ್, ಕ್ರಿಕೆಟ್ ಮತ್ತು ಫುಟ್‌ಬಾಲ್ ತರಬೇತಿ ಶಿಬಿರಕ್ಕೆ ಇತ್ತೀಚೆಗೆ ಚಾಲನೆ ನೀಡಲಾಯಿತು.

ತಾಲ್ಲೂಕಿನ ಯುವ ಕ್ರೀಡಾಪಟುಗಳು ಕ್ರೀಡಾ ಕ್ಷೇತ್ರದಲ್ಲಿ ಮುನ್ನಡೆಯಲು ಅನುಕೂಲವಾಗುವಂತೆ, ಖಾನಾಪುರದ ಮರಾಠಾ ಮಂಡಳದ ಸಿದ್ಧಿವಿನಾಯಕ ಶಾಲೆಯ ಸುಸಜ್ಜಿತ ಮೈದಾನದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ತಜ್ಞ ತರಬೇತುದಾರರ ಮಾರ್ಗದರ್ಶನದಲ್ಲಿ ನಡೆಯಲಿದ್ದು, ಆಸಕ್ತ ಕ್ರೀಡಾಪಟುಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ. ಪ್ರಸಾದ್ ಜಾಧವ್ ಮತ್ತು ರಾಜಲಕ್ಷ್ಮೀ ಜಾಧವ್ ಅವರು ಮೈದಾನದ ಪೂಜೆ ನೆರವೇರಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸ್ಕೇಟಿಂಗ್ ತರಬೇತುದಾರರಾದ ಸೂರ್ಯಕಾಂತ್ ಹಿಂಡಲಗೇಕರ್, ಯೋಗೇಶ್ ಕುಲಕರ್ಣಿ, ಋಷಿಕೇಶ್ ಪಸಾರೆ, ಸಾಯಿ ಸ್ಪೋರ್ಟ್ಸ್ ಅಕಾಡೆಮಿಯ ಸಿಬ್ಬಂದಿ ವರ್ಗ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಮತ್ತು ಪಾಲಕರು ಉಪಸ್ಥಿತರಿದ್ದರು.

Tags:

error: Content is protected !!