Dharwad

ಏ.14ರಿಂದ ಡಾ. ಬಿ.ಆರ್. ಅಂಬೇಡ್ಕರ ಜಯಂತಿ ನಿಮಿತ್ತ ‘”ಭೀಮ ನಡಿಗೆ ಶೀಘ್ರ ನೇಮಕಾತಿ ಕಡೆಗೆ'” ಹೋರಾಟ- ಶಂಕರ್ ಅಂಬಲಿ.

Share

ಉದ್ಯೋಗಾಕಾಂಕ್ಷಿಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಏ.14ರಿಂದ ಜಯನಗರ ಕ್ರಾಸ್ ಬಳಿಯ ಶಾರದಾ ಸ್ಕೂಲ್ ಹತ್ತಿರ ರಸ್ತೆ ಬದಿ ಕರ್ನಾಟಕ ವಿದ್ಯಾರ್ಥೀಗಳ ಸಂಘದ ವತಿಯಿಂದ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಜನಸಾಮಾನ್ಯರ ವೇದಿಕೆ ಮುಖಂಡ ಯಲ್ಲಪ್ಪ ಹೆಗಡೆ ತಿಳಿಸಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 50ರಿಂದ 100 ಉದ್ಯೋಗಾಕಾಂಕ್ಷಿಗಳು ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವರು. ಡಾ. ಬಿ.ಆರ್. ಅಂಬೇಡ್ಕರ ಜಯಂತಿ ನಿಮಿತ್ತ ಏ.14ರಂದು “ಭೀಮ ನಡಿಗೆ ಶೀಘ್ರ ನೇಮಕಾತಿ ಕಡೆಗೆ’ ಪಾದಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ಅದನ್ನು ರದ್ದುಪಡಿಸಲಾಗಿದೆ. ರಾಜ್ಯ ಸರಕಾರ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕು. ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷರ‍್ಸ್ (ಕೆಎಎಸ್) 384 ಹುದ್ದೆಗಳ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಆದ್ದರಿಂದ ಕೆಎಎಸ್ ಮರು ಅಧಿಸೂಚನೆ ಹೊರಡಿಸಬೇಕು. ರಾಜ್ಯದಲ್ಲಿ ಶಿಸ್ತುಬದ್ಧ ನೇಮಕಾತಿಗಾಗಿ ವಾರ್ಷಿಕ ವೇಳಾಪಟ್ಟಿ ಬಿಡುಗಡೆಗೊಳಿಸಬೇಕು. 56,423 ಹುದ್ದೆಗಳನ್ನು ಕೆಇಎ ಮೂಲಕ ನೇಮಕ ಮಾಡಿಕೊಳ್ಳಬೇಕು. 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಖಾಯಂಗೊಳಿಸಬೇಕು. ದೈಹಿಕ ಶಿಕ್ಷಕರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕೆಂದರು.

ಮೂರು ಕರಾಳ ಎಪಿಎಂಸಿ ಕಾಯ್ದೆಗಳನ್ನು ರದ್ದುಪಡಿಸಲು ದೆಹಲಿ ಗಡಿಯಲ್ಲಿ ರೈತರು ನಡೆಸಿದ ಹೋರಾಟದ ಮಾದರಿಯಲ್ಲಿ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹೋರಾಟ ನಡೆಸಲಾಗುವುದು ಎಂದರು.

Tags:

error: Content is protected !!