Vijaypura

ಚಾಲಕನ ನಿಯಂತ್ರಣ ತಪ್ಪಿ ಕೆ.ಕೆ.ಆರ್​.ಟಿ.ಸಿ ಬಸ್​ ಪಲ್ಟಿ:20 ಮಂದಿಗೆ ಗಾಯ

Share

ಚಾಲಕನ ನಿಯಂತ್ರಣ ತಪ್ಪಿ ಬಸವನಬಾಗೇವಾಡಿ ಘಟಕದ ಬಸ್ ಪಲ್ಟಿಯಾದ ಘಟನೆ
ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದ ಸಮೀಪ ಸಾತಿಹಾಳ ರಸ್ತೆಯ ಕ್ಯಾನಲ್ ಹತ್ತಿರದ ತಿರುವಿನಲ್ಲಿ ಸೋಮವಾರ ಸಂಜೆ ನಡೆದಿದೆ. ಬಸವನಬಾಗೇವಾಡಿ ಘಟಕದ ಬಸ್ ಹೂವಿನ ಹಿಪ್ಪರಗಿ ದಿಂದ ಸಾತಿಹಾಳ ಮಾರ್ಗವಾಗಿ ದೇವರಹಿಪ್ಪರಗಿ ತೆರಳುತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಸ್ಸಿನಲ್ಲಿದ್ದ ಸುಮಾರು 40 ಜನ ಪ್ರಯಾಣಿಕರಲ್ಲಿ 20 ಮಂದಿಗೆ ಗಾಯವಾಗಿದ್ದು, ಗಾಯಾಳುಗಳಿಗೆ ಸಿಂದಗಿ ಹಾಗೂ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ದೇವರಹಿಪ್ಪರಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ದೇವರಹಿಪ್ಪರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರ ಸಹೋದರ ಸಚೀನಗೌಡ ಪಾಟೀಲ ಕುದರಿಸಾಲವಾಡಗಿ ಅವರು ಮದುವೆಯ ಕಾರ್ಯಕ್ರಮ ಮುಗಿಸಿಕೊಂಡು ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ಪಟ್ಟಣದ ಸಮೀಪ ಬಸ್ ಪಲ್ಟಿಯಾಗಿ ಹಲವಾರು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಕೂಡಲೆ ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸಲು ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿ ಜಿಲ್ಲಾ ಹಾಗೂ ತಾಲೂಕ ಆರೋಗ್ಯ ಅಧಿಕಾರಿಗಳ ಜೊತೆ ಮಾತನಾಡಿ ಸಿಂದಗಿ ಹಾಗೂ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಪ್ರಯಾಣಿಕರನ್ನು ಸೇರಿಸಿ ಅವರ ಯೋಗ ಕ್ಷೇಮ ವಿಚಾರಿಸಿ ಮಾನವಿತೆ ಮೆರೆದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Tags:

error: Content is protected !!