Bagalkote

ಬಾಗಲಕೋಟೆ: ನಿಯಂತ್ರಣ ತಪ್ಪಿ ರಸ್ತೆಬದಿಗೆ ನುಗ್ಗಿದ ಬಸ್; ತಪ್ಪಿದ ಭಾರಿ ದುರಂತ!

Share

• ಬಾಗಲಕೋಟೆಯಲ್ಲಿ ತಪ್ಪಿದ ಭಾರಿ ಬಸ್ ದುರಂತ
• ಚಾಲಕನ ನಿಯಂತ್ರಣ ತಪ್ಪಿ ನುಗ್ಗಿದ ಬಸ್
• ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಅಪಘಾತ
• ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಸುರಕ್ಷಿತ
ಬಾಗಲಕೋಟೆ ನಗರದ ಡಾ. ಅಂಬೇಡ್ಕರ್ ಸರ್ಕಲ್ ಬಳಿ ಇಂದು ಮುಂಜಾನೆ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಬಾಗಲಕೋಟೆ ಶಹರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನಿಂದ ಬಾಗಲಕೋಟೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಅಪಘಾತಕ್ಕೀಡಾಗಿದ್ದು, ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆ ಬದಿಗೆ ನುಗ್ಗಿದ್ದು, ಈ ವೇಳೆ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಬಾಗಲಕೋಟೆ ಶಹರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಕ್ರೇನ್ ಮೂಲಕ ಬಸ್ಸನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗಿದೆ. ನಗರದ ಜನನಿಬಿಡ ಪ್ರದೇಶದಲ್ಲೇ ಈ ಘಟನೆ ನಡೆದಿದ್ದು, ಸಾರ್ವಜನಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತ್ತು.

Tags:

error: Content is protected !!