Belagavi

ಡಿಸೆಂಬರ್’ನಲ್ಲಿ ನೀಡಿದ್ದ ಭರವಸೆ ಮರೆತ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಬೃಹತ್ ರ್ಯಾಲಿ; ಜಿ.ಪಂ ಎದುರು ಸಿಐಟಿಯೂ ಧರಣಿ

Share

• ಪಂಚಾಯತ ನೌಕರರ ಐದು ಸಾವಿರ ವೇತನಕ್ಕೆ ಪಟ್ಟು
• ಸರ್ಕಾರದ ಭರವಸೆ ಹುಸಿಯಾಗಿದ್ದಕ್ಕೆ ನೌಕರರ ಆಕ್ರೋಶ
• ಐದು ಲಕ್ಷ ಇಡಗಂಟು ನೀಡಲು ಆಗ್ರಹ
• ಬೆಳಗಾವಿ ಜಿ.ಪಂ ಮುಖಾಂತರ ಸರ್ಕಾರಕ್ಕೆ ಎಚ್ಚರಿಕೆ

ರಾಜ್ಯದ ಗ್ರಾಮೀಣಾಭಿವೃದ್ಧಿಯ ಬೆನ್ನೆಲುಬಾಗಿರುವ ಗ್ರಾಮ ಪಂಚಾಯತ ನೌಕರರು ಈಗ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಡಿಸೆಂಬರ್‌ನಲ್ಲಿ ನೀಡಿದ್ದ ಭರವಸೆಗಳು ಕೇವಲ ಕಾಗದದ ಮೇಲೆ ಉಳಿದಿರುವುದನ್ನು ಖಂಡಿಸಿ, ಇಂದು ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ ವತಿಯಿಂದ ಬೃಹತ ಪ್ರತಿಭಟನೆ ನಡೆಯಲಾಯಿತು.

ಇಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ ವತಿಯಿಂದ ಜಿಲ್ಲಾ ಪಂಚಾಯಿತಿ ಎದುರು ಧರಣಿಯನ್ನು ನಡೆಸಲಾಯಿತು.

ಕಳೆದ ಡಿಸೆಂಬರ್‌ನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಧರಣಿಯ ಸಂದರ್ಭದಲ್ಲಿ, ಸರ್ಕಾರಿ ಅಧಿಕಾರಿಗಳು ನೀಡಿದ್ದ ಲಿಖಿತ ಭರವಸೆಗಳು ನಾಲ್ಕು ತಿಂಗಳಾದರೂ ಜಾರಿಯಾಗದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ ನೌಕರರ ಸಂಘ (CITU) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪ್ರಮುಖವಾಗಿ ಎಲ್ಲಾ ನೌಕರರಿಗೆ 5,000 ರೂಪಾಯಿ ವೇತನ ಹೆಚ್ಚಳ, ನಿವೃತ್ತಿ ಹೊಂದಿದವರಿಗೆ 5 ಲಕ್ಷ ರೂಪಾಯಿ ಇಡಗಂಟು ನೀಡುವ ಭರವಸೆಗಳು ಈವರೆಗೂ ಈಡೇರಿಲ್ಲ. ಇದರಿಂದಾಗಿ ಬೆಳಗಾವಿ ಜಿಲ್ಲಾ ಸಮಿತಿಯು ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಲಾಯಿತು. ಕೇವಲ ವೇತನ ಹೆಚ್ಚಳ ಮಾತ್ರವಲ್ಲದೆ, ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಡೇಟಾ ಎಂಟ್ರಿ ಆಪರೇಟರ್‌ಗಳ ಉದ್ಯೋಗ ಅನುಮೋದನೆ, ಇಎಸ್‌ಐ ಮತ್ತು ಭವಿಷ್ಯ ನಿಧಿ ಜಾರಿಯಂತಹ ಹಕ್ಕೊತ್ತಾಯಗಳನ್ನು ನೌಕರರು ಮುಂದಿಟ್ಟಿದ್ದಾರೆ. ಅಧಿಕಾರಿಗಳು ಸಭೆಯಲ್ಲಿ ಒಪ್ಪಿಕೊಂಡ ಬೇಡಿಕೆಗಳನ್ನು ಜಾರಿಗೆ ತರಲು ವಿಳಂಬ ಮಾಡುತ್ತಿರುವುದು ನೌಕರರ ಕೆಂಗಣ್ಣಿಗೆ ಗುರಿಯಾಗಿದೆ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಈ 9 ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪಂಚಾಯತ ಕೆಲಸಗಳನ್ನು ಸ್ಥಗಿತಗೊಳಿಸಿ ಉಗ್ರ ಹೋರಾಟ ನಡೆಸುವುದಾಗಿ ಸಿಐಟಿಯೂ ಅಧ್ಯಕ್ಷ ಜೆ.ಎಂ. ಜೈನೆಖಾನ್ ಹೇಳಿದರು.

ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸರ್ಕಾರವು ಕಾಲಕಾಲಕ್ಕೆ ಕನಿಷ್ಠ ವೇತನ, ಸೇವಾ ಭದ್ರತೆ, ಪಿಂಚಣಿ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ತೋರುತ್ತಿದೆ. ಕೆಲಸದಿಂದ ತೆಗೆಯುವಂತಹ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಜಿಲ್ಲಾ ಪಂಚಾಯಿತಿ ಹಂತದಲ್ಲಿ ಹಲವಾರು ಕಾರಣಗಳನ್ನು ನೀಡಿ, ಹಲವಾರು ನೌಕರರಿಗೆ ಇನ್ನು ಅನುಮೋದನೆಯನ್ನು ಮಾಡಿಲ್ಲ. ಬೇರೆ ಜಿಲ್ಲೆಗಳಂತೆ ನಮ್ಮ ಜಿಲ್ಲೆಯಲ್ಲಿಯೂ ಅನುಮೋದನೆ ನೀಡಬೇಕು ಮತ್ತು ಕನಿಷ್ಠ ವೇತನವನ್ನು ನೀಡಬೇಕು. ಇಲ್ಲದಿದ್ದರೇ, ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಸಂಘದ ಪ್ರಧಾನ ಕಾರ್ಯದರ್ಶಿ ಮಡ್ಡೆಪ್ಪ ಭಜಂತ್ರಿ ಎಚ್ಚರಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಖಜಾಂಚಿ ವೀರಭದ್ರ ಕಂಪ್ಲಿ ಸೇರಿದಂತೆ ಗ್ರಾಮ ಪಂಚಾಯತ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.

Tags:

error: Content is protected !!