• ಬಿಎಸ್‌ಎನ್‌ಎಲ್ ನಿವೃತ್ತ ನೌಕರರಿಂದ ರಾಷ್ಟ್ರವ್ಯಾಪಿ ಹೋರಾಟ
• ಡಿಎ ಪಾವತಿ ಮಾಡದ ಸರ್ಕಾರಕ್ಕೆ ಧಿಕ್ಕಾರ
• ವಿಜಯಪುರ ಬಿಎಸ್‌ಎನ್‌ಎಲ್ ಕಚೇರಿ ಮುಂದೆ ಧರಣಿ
• ಪಿಂಚಣಿದಾರರ ಜೀವನದೊಂದಿಗೆ ಸರ್ಕಾರದ ಚೆಲ್ಲಾಟ

ಡಿಎ ಪಾವತಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಜಯಪುರ ನಗರದಲ್ಲಿ ಬಿಎಸ್‌ಎನ್‌ಎಲ್ ನಿವೃತ್ತ ನೌಕರರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು
. ರಾಷ್ಟ್ರವ್ಯಾಪಿ ಹೋರಾಟದ ಭಾಗವಾಗಿ ನಗರದ ಮಹಾತ್ಮಾ ಗಾಂಧಿ ರಸ್ತೆ ಪಕ್ಕದಲ್ಲಿ ಇರುವ ಬಿಎಸ್‌ಎನ್‌ಎಲ್ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ನಿವೃತ್ತ ನೌಕರರು ಭಾಗವಹಿಸಿದ್ದರು. ಬೇಡಿಕೆಗಳ ಫಲಕಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಡಿಎ ಪಾವತಿ ತಡೆ ಹಿಡಿದಿರುವುದರಿಂದ ನಿವೃತ್ತ ನೌಕರರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಪಿಂಚಣಿದಾರರು ಆರ್ಥಿಕವಾಗಿ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
