ಧಾರವಾಡ ಬಿಜೆಪಿ ಮುಖಂಡ ಯೋಗೇಶಗೌಡ ಗೌಡರ ಕೊಲೆ ಪ್ರಕರಣ ತೀರ್ಪಿನ ಶಿಕ್ಷೆ ಪ್ರಮಾಣವನ್ನು ಜನಪ್ರತಿನಿಧಿ ನ್ಯಾಯಾಲಯದಿಂದ ಹೊರ ಬೀಳಲು ಕ್ಷಣ ಗಣನೆ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಧಾರವಾಡದ ಬಸವರಾಜ್ ಕೊರವರ ನಿವಾಸಕ್ಕೆ ಪೊಲೀಸ್ ಬಿಗಿ ಬಂದೋಬಸ್ತ ಕೈಗೊಳ್ಳಲಾಗಿದೆ.

ನಗರದ ಸಂಪಿಗೆ ನಗರದಲ್ಲಿರುವ ಸಾಮಾಜಿಕ ಕಾರ್ಯಕರ್ತ ಬಸವರಾಜ್ ಕೊರವರ ನಿವಾಸಕ್ಕೆ ಏಂಟು ಜನ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಯೋಗೇಶಗೌಡ ಗೌಡರ ಕೊಲೆ ಪ್ರಕರಣ 2016 ಜೂನ 15 ರಂದು ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಕೊರವರ ಅವರು ಹೋರಾಟದ ಮುಂಚೂಣಿಯಲ್ಲಿದ್ದರು, ಈಗ ಬಸವರಾಜ ಕೊರವರು ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯದಲ್ಲಿದ್ದು, ನಿವಾಸದ ಬಳಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗ ಧಾರವಾಡ ಉಪನಗರ ಠಾಣೆಯ ಪೊಲೀಸರಿಂದ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
