• ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ
• ಡಿಸಿ ಕಚೇರಿಯ ಇಬ್ಬರು ಭ್ರಷ್ಟರ ಬಂಧನ
• ಪೆಟ್ರೋಲ್ ಬಂಕ್ ನಕಾಶೆಗೆ ಲಂಚದ ಬೇಡಿಕೆ
• ವಿಜಯಪುರ ಡಿಸಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ

ಲಂಚ ಸ್ವೀಕರಿಸುವ ವೇಳೆ ಜಿಲ್ಲಾಧಿಕಾರಿ ಕಚೇರಿಯ ಇಬ್ಬರು ಸಿಬ್ಬಂದಿ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ.
ಪೆಟ್ರೋಲ್ ಬಂಕ್ ನಕಾಶೆ ತಯಾರಿಸಿ ಡಿಸಿ ಸಹಿಗೆ ಒದಗಿಸಲು ₹15,000 ಲಂಚ ಬೇಡಿಕೆ ಇಟ್ಟಿದ್ದ ಎಸ್ಡಿಸಿ ಅರವಿಂದ ಪವಾರ್ ಹಾಗೂ ಕಂಪ್ಯೂಟರ್ ಆಪರೇಟರ್ ಅಯೂಬ್ ತೊನಶ್ಯಾಳ ವಿರುದ್ಧ ದೂರು ದಾಖಲಾಗಿತ್ತು. ಸುಶೀಲ್ ವಗ್ಗನ್ನವರ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆರೋಪಿಗಳು ಲಂಚ ಸ್ವೀಕರಿಸುವಾಗಲೇ ದಾಳಿ ನಡೆಸಿ ಇಬ್ಬರನ್ನೂ ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ.ಈ ಘಟನೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎಬ್ಬಿಸಿದ್ದು, ಮುಂದಿನ ತನಿಖೆಯನ್ನು ಲೋಕಾಯುಕ್ತ ಅಧಿಕಾರಿಗಳು ಕೈಗೊಂಡಿದ್ದಾರೆ.
