BELAGAVI

ಹಂದಿನೂರಿನಲ್ಲಿ ಸಂಭ್ರಮದ ಮಹಾಲಕ್ಷ್ಮಿ ಜಾತ್ರೆ: ಸಚಿವ ಸತೀಶ್ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ

Share

ಬೆಳಗಾವಿ ಜಿಲ್ಲೆಯ ಹಂದಿನೂರು ಗ್ರಾಮದಲ್ಲಿ ಇಂದು ಮಹಾಲಕ್ಷ್ಮಿ ಜಾತ್ರೆಯು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ರಾಜ್ಯ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ದೇವಿಯ ದರ್ಶನ ಪಡೆದು ಆಶೀರ್ವಾದ ಕೋರಿದರು.

ಹಂದಿನೂರು ಗ್ರಾಮದಲ್ಲಿ ನಡೆದ ಶ್ರೀ ಮಹಾಲಕ್ಷ್ಮಿ ಜಾತ್ರೆಯ ನಿಮಿತ್ತ ಸಚಿವ ಸತೀಶ್ ಜಾರಕಿಹೊಳಿ, ಚಿಕ್ಕೋಡಿ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಆಗಮಿಸಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮದ ಹಿರಿಯರು ಸಚಿವರು ಮತ್ತು ಗಣ್ಯರನ್ನು ಆತ್ಮೀಯವಾಗಿ ಸತ್ಕರಿಸಿದರು. ಕಾರ್ಯಕ್ರಮದಲ್ಲಿ ಸಚಿವರ ಆಪ್ತ ಸಹಾಯಕರು ಹಾಗೂ ಕೆಪಿಸಿಸಿ ಸದಸ್ಯರಾದ ಮಲಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಅಪಾರ ಸಂಖ್ಯೆಯ ಗ್ರಾಮಸ್ಥರು ಉಪಸ್ಥಿತರಿದ್ದು ಸಂಭ್ರಮಕ್ಕೆ ಸಾಕ್ಷಿಯಾದರು.

Tags:

error: Content is protected !!