ಮೈಸೂರಿನ ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಅಹವಾಲು ಸ್ವೀಕರಿಸಿದ ಬಳಿಕ, ಯಾವುದೇ ಮಾಧ್ಯಮ ಪ್ರತಿಕ್ರಿಯೆ ನೀಡದೆ ಮುಖ್ಯಮಂತ್ರಿಗಳು ಮುಂದಿನ ಕಾರ್ಯನಿಮಿತ್ತ ಚಾಮರಾಜನಗರದತ್ತ ಪ್ರಯಾಣ ಬೆಳೆಸಿದರು.

ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರನ್ನು ಭೇಟಿ ಮಾಡಿ ಅಹವಾಲುಗಳನ್ನು ಸ್ವೀಕರಿಸಿದರು. ಸಿಎಂ ಅವರನ್ನು ಭೇಟಿಯಾಗಿ ತಮ್ಮ ಅಹವಾಲು ಸಲ್ಲಿಸಲು ಬೆಳಿಗ್ಗೆಯಿಂದಲೇ ಜನರ ದಂಡು ನೆರೆದಿತ್ತು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಯೊಬ್ಬರ ಸಮಸ್ಯೆಗಳನ್ನು ಆಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹಾರಕ್ಕಾಗಿ ಸೂಚನೆ ನೀಡಿದರು. ಅಹವಾಲು ಸ್ವೀಕರಿಸಿದ ಬಳಿಕ, ಯಾವುದೇ ಮಾಧ್ಯಮ ಪ್ರತಿಕ್ರಿಯೆ ನೀಡದೆ ಮುಖ್ಯಮಂತ್ರಿಗಳು ಮುಂದಿನ ಕಾರ್ಯನಿಮಿತ್ತ ಚಾಮರಾಜನಗರದತ್ತ ಪ್ರಯಾಣ ಬೆಳೆಸಿದರು.
