Belagavi

ಗೋಕಾಕ ನಗರದಲ್ಲಿ ಆತಂಕ: ಪಾಳುಬಿದ್ದ ಚರಂಡಿಯಲ್ಲಿ ಶವ ಪತ್ತೆ, ಸ್ಥಳಕ್ಕೆ ಪೊಲೀಸರ ಭೇಟಿ

Share

ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ಪಾಳುಬಿದ್ದ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ನಡೆದಿದೆ‌.
ಗೋಕಾಕ ನಗರದ ಬೆಣಚಿನಮರಡಿ ಕ್ರಾಸ್ ಬಳಿ ಪಾಳುಬಿದ್ದ ಚರಂಡಿಯಲ್ಲಿ ಸುಮಾರು 30ರಿಂದ 40 ವರ್ಷದೊಳಗಿನ ಅನಾಮಧೇಯ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತನು ನಾಲ್ಕೈದು ದಿನಗಳ ಹಿಂದೆಯೇ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.
ಸ್ಥಳೀಯರು ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ, ಗೋಕಾಕ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹದ ಸ್ಥಿತಿ ಅನುಮಾನ ಹುಟ್ಟಿಸುವಂತಿದ್ದು, ಇದು ಅಪಘಾತವೇ ಅಥವಾ ಕೊಲೆ ಮಾಡಿ ಶವವನ್ನು ಇಲ್ಲಿ ಎಸೆದಿರುವುದೇ ಎಂಬ ದಿಕ್ಕಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗೋಕಾಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!