ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ. ಬಹುತೇಕ ಭಾಗಗಳಲ್ಲಿ ಬಿಸಿಲಿನ ತಾಪಮಾನ ಮುಂದುವರಿ ಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏ.23 ರಂದು ಅಲ್ಲಲ್ಲಿ ಹಗುರ ಮಳೆಯಾಗುವ ಲಕ್ಷಣಗಳಿವೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಏ.25ರವರೆಗೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಏ.23 ಮತ್ತು 24 ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

