Dharwad

ಧಾರವಾಡದಲ್ಲಿ ದಾರುಣ ಘಟನೆ: ಮೂತ್ರ ವಿಸರ್ಜನೆ ವೇಳೆ ಗೋಡೆ ಕುಸಿದು ವ್ಯಕ್ತಿ ಸಾವು!

Share

ಮೂರ್ತ ವಿಸರ್ಜನೆ ಮಾಡುತ್ತಿದ್ದ ವೇಳೆ ವ್ಯಕ್ತಿಯ ಮೇಲೆ ಎದುರಿನ ಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಧಾರವಾಡದಲ್ಲಿ ಕಳೆದ ದಿನ ತಡ ರಾತ್ರಿ ಸಂಭವಿಸಿದೆ.

ಧಾರವಾಡ ನಗರದ ಟಿಕಾರೆ ರಸ್ತೆಯ ಗೌಳಿಗಲ್ಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.‌ ಮಾರುತಿ ಮಾಹಾದೇವ ಕಾಟಾರ್ (37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಸ್ಥಳೀಯರ ಮಾಹಿತಿ‌ ಮೇರೆಗೆ ಘಟನಾ ಸ್ಥಳಕ್ಕೆ ಧಾರವಾಡ ಶಹರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಸದ್ಯ ಮೃತ ವ್ಯಕ್ತಿ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದು, ಕಾನೂನು ಕ್ರಮ ಕೈಗೊಂಡಿದೆ.

Tags:

error: Content is protected !!