Khanapur

ಖಾನಾಪುರ ತಾಲೂಕಿಗೆ ಹೆಮ್ಮೆಯ ಗರಿ: ಕರ ವಸೂಲಿಯಲ್ಲಿ ದಾಖಲೆ, ಇಒ ರಮೇಶ್ ಮೇತ್ರಿಗೆ ಜಿಲ್ಲಾ ಮಟ್ಟದ ಪುರಸ್ಕಾರ!

Share

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪಂಚಾಯಿತಿಗಳು ತೆರಿಗೆ ವಸೂಲಿಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿವೆ. ಈ ಐತಿಹಾಸಿಕ ಸಾಧನೆಗಾಗಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯಂದು ಖಾನಾಪುರ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಮೇತ್ರಿ ಅವರಿಗೆ “ಅತ್ಯುತ್ತಮ ಸೇವಾ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಖಾನಾಪುರ ತಾಲೂಕಿನ ಒಟ್ಟು 51 ಗ್ರಾಮ ಪಂಚಾಯಿತಿಗಳು 2025-26ನೇ ಸಾಲಿನ ಕರ ವಸೂಲಿಯಲ್ಲಿ ರಾಜ್ಯದ ಗಮನ ಸೆಳೆಯುವಂತಹ ಸಾಧನೆ ಮಾಡಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪಂಚಾಯತ್ ಆಯೋಜಿಸಿದ್ದ ಸಮಾರಂಭದಲ್ಲಿ, ಇಡೀ ತಾಲೂಕಿನ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಮೇತ್ರಿ ಅವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಮ್ಮುಖದಲ್ಲಿ ಈ ಗೌರವ ಸಮರ್ಪಿಸಲಾಯಿತು. ಶಾಸಕ ಆಸೀಫ್ ಸೇಠ್, ವಿನಯ್ ನಾವಲಗಟ್ಟಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಮನ್ವಯದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಗಣ್ಯರು ಶ್ಲಾಘಿಸಿದರು.

Tags:

error: Content is protected !!